ಗುರುವಾರ , ಮಾರ್ಚ್ 23, 2023
30 °C

ಎಪಿಎಂಸಿ ಕಾರ್ಯದರ್ಶಿ ಸೋಮು ನ್ಯಾಮಗೌಡ ಬಂಧಿಸಿದ ಸಿಬಿಐ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪಿಎಂಸಿ ಕಾರ್ಯದರ್ಶಿ ಸೋಮು ನ್ಯಾಮಗೌಡ ಅವರನ್ನು ಸಿಬಿಐ ಅಧಿಕಾರಿಗಳು ಗುರುವಾರ ಬಂಧಿಸಿ ಇಲ್ಲಿನ ಉಪನಗರ ಠಾಣೆಗೆ ವಿಚಾರಣೆಗಾಗಿ ಕರೆತಂದಿದ್ದಾರೆ.

ಸೋಮು ನ್ಯಾಮಗೌಡ ಅವರು ಪಕರಣದಲ್ಲಿ ಬಂಧಿತರಾಗಿರುವ ವಿನಯ ಕುಲಕರ್ಣಿ ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿದ್ದಾಗ ಅವರ ಆಪ್ತ ಕಾರ್ಯದರ್ಶಿಯಾಗಿದ್ದರು. ಸದ್ಯ ಬ್ಯಾಡಗಿ ಎಪಿಎಂಸಿ ಕಾರ್ಯದರ್ಶಿಯಾಗಿದ್ದಾರೆ.

ಗುರುವಾರ ನಸುಕಿನಲ್ಲಿ ಗದುಗಿನಲ್ಲಿರುವ ಅವರ ಮನೆಗೆ ಹೋದ ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿ ಕರೆ ತಂದಿದ್ದಾರೆ. ಈ ಹಿಂದೆಯೂ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು