ಹುಬ್ಬಳ್ಳಿ: ‘ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಹುಬ್ಬಳ್ಳಿಯ ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು, ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮಾತನಾಡಿ, ‘ಪ್ರಜ್ವಲ್ ರೇವಣ್ಣ ಕಾಮುಕ. ಆತನಿಗೆ ಕಠಿಣ ಶಿಕ್ಷೆ ಆಗಲೇಬೇಕು. ಆತ ರಾಜ್ಯದ ಮರ್ಯಾದೆಯನ್ನು ಹರಾಜು ಹಾಕಿದ್ದಾನೆ’ ಎಂದು ಹರಿಹಾಯ್ದರು.

‘ಬೇಟಿ ಬಚಾವೊ ಬೇಟಿ ಪಢಾವೊ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಬಿಜೆಪಿಯ ಶೋಭಾ ಕರಂದ್ಲಾಜೆ, ಶ್ರುತಿ, ತಾರಾ ಅನೂರಾಧ ಸೇರಿದಂತೆ ಯಾರೂ ಧ್ವನಿ ಎತ್ತುತ್ತಿಲ್ಲ’ ಎಂದು ಆರೋಪಿಸಿದರು.

‘ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಎಚ್.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ತಪ್ಪು ಮಾಡಿದ್ದರಿಂದ ವಿದೇಶಕ್ಕೆ ಪರಾರಿಯಾಗಿದ್ದಾನೆ. ಅನ್ಯಾಯವಾಗಿರುವ ಮಹಿಳೆಯರಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ’ ಎಂದು ಹೇಳಿದರು.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್, ಶಾಸಕ ಶ್ರೀನಿವಾಸ ಮಾನೆ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.