ಮಂಗಳವಾರ, ಅಕ್ಟೋಬರ್ 20, 2020
21 °C

ಕೆರೆಯಲ್ಲಿ ಮುಳುಗಿ ಯುವಕ ಸಾವು    

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಘಟಗಿ: ತಾಲ್ಲೂಕಿನ ಮಾಚಾಪೂರ ಗ್ರಾಮದ ಕ್ಯಾತನಕೆರೆಯಲ್ಲಿ ಮುಳುಗಿ ಪಟ್ಟಣದ ಗಣೇಶ್ ಗೌಳಿ (22) ಎಂಬ ಯುವಕ ಶುಕ್ರವಾರ ಮೃತಪಟ್ಟಿದ್ದಾನೆ.

ಮಧ್ಯಾಹ್ನ ಸ್ನೇಹಿತರ ಜೊತೆ ಈಜಲು ಹೋಗಿ ಈಜು ಬಾರದೆ ಕೆರೆಯಲ್ಲಿ ಮುಳುಗಿದ್ದಾನೆ ಎಂದು ತಿಳಿದು ಬಂದಿದೆ. ಕೆರೆಯಲ್ಲಿ ಯುವಕ ಮುಳುಗಿರುವ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾಕಾರ್ಯ ಕೈಗೊಂಡರು. ಎರಡು ಗಂಟೆಗಳ ಕಾಲ ತೀವ್ರ ಹುಡುಕಾಟ ನಡೆಸಿ ಯುವಕನ ಮೃತದೇಹ ಹೊರಗೆ ತೆಗೆದಿದ್ದಾರೆ.

ರಕ್ಷಣಾ ಕಾರ್ಯದಲ್ಲಿ ಆನಂದ ಮುದೇನವರ, ಮಾರುತಿ ಹೈಬತ್ತಿ, ಎಂ.ಐ ಕಿತ್ತೂರು, ರಾಜು ಜಾಧವ್, ಉಮೇಶ ತೆಂಬದ ಪಾಲ್ಗೊಂಡಿದ್ದರು. ಯುವಕನ ಮೃತದೇಹ ಪತ್ತೆಯಾಗುತ್ತಿದ್ದಂತೆಯೇ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು. ಮೃತ ಯುವಕನನ್ನು ನೋಡಲು ಮಾಜಿ ಸಚಿವ ಸಂತೋಷ್ ಲಾಡ್ ಬಂದು ಕುಟುಂಬದವರಿಗೆ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.