ಧಾರವಾಡ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ರಾಷ್ಟ್ರಾದ್ಯಂತ ಅಧೀನ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಏಪ್ರಿಲ್ 12ರವರೆಗೆ ಜಿಲ್ಲೆಯಾದ್ಯಂತ ಅಧೀನ ನ್ಯಾಯಾಲಯಗಳಲ್ಲಿ 2ನೇ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಆಯೋಜಿಸಲಾಗಿದೆ.

ಈ ಅದಾಲತ್ ಮುಖಾಂತರ ಜಿಲ್ಲೆಯಾದ್ಯಂತ ಅಧೀನ ನ್ಯಾಯಾಲಯಗಳಲ್ಲಿ ಸುಮಾರು 2,100 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಅದರಲ್ಲಿ 48 ಮೋಟಾರು ವಾಹನ ಅಪಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ ₨ 56,17,500 ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ಈ ಅದಾಲತ್ ಕುರಿತು ಅಧೀನ ನ್ಯಾಯಾಲಯದ ನ್ಯಾಯಾಧೀಶರನ್ನು, ಜಿಲ್ಲಾಧಿಕಾರಿಗಳನ್ನು ಹಾಗೂ ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ಪೊಲೀಸ್ ಇಲಾಖೆ ಅಧಿಕಾರಿಗಳು, ವಿವಿಧ ಬ್ಯಾಂಕಿನ ವ್ಯವಸ್ಥಾಪಕರು, ವಿಮಾ ಕಂಪೆನಿಯ ವ್ಯವಸ್ಥಾಪಕರು ಹಾಗೂ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳಲ್ಲಿ ಭಾಗವಹಿಸುವಂತಹ ಕಂಪನಿ ಪರ ವಕೀಲರು ಹಾಗೂ ಕಕ್ಷಿದಾರರ ಪರ ವಕೀಲರಿಗೆ ಸಭೆಯನ್ನು ಕರೆದು ಸದರಿ ವಿಷಯವಾಗಿ ಚರ್ಚಿಸಲಾಯಿತು. ಅದಾಲತ್ ಯಶಸ್ವಿಗೊಳಿಸುವ ಉದ್ದೇಶದಿಂದ ಅವರ ಸಲಹೆ ಸೂಚನೆಗಳನ್ನು ಪಡೆದು ಹೆಚ್ಚು ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲು ಅನಕೂಲವಾಗುವಂತಹ ಮಾರ್ಗಸೂಚಿಗಳನ್ನು ಪಡೆಯಲಾಯಿತು.

ಲೋಕ ಅದಾಲತ್ ಮುಖಾಂತರ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ಪುರಸಭೆ, ಪಂಚಾಯ್ತಿ, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಅಥವಾ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳು, ರಾಜಿ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.

ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.