ಹುಬ್ಬಳ್ಳಿ: ಮಹಾನಗರ ಪಾಲಿಕೆಗೆ ಪೂರ್ಣಾವಧಿ ಆಯುಕ್ತರಿಲ್ಲದೇ ಎರಡು ತಿಂಗಳು ಗತಿಸಿವೆ. ಈ ನಡುವೆ, ಕೆಲ ಕಾಂಗ್ರೆಸ್ ಮುಖಂಡರು ತಮಗೆ ಆಪ್ತರಾಗಿರುವ ಅಧಿಕಾರಿಗಳನ್ನು ಆಯುಕ್ತರನ್ನಾಗಿ ನೇಮಕ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ದುಂಬಾಲು ಬಿದ್ದಿದ್ದಾರೆ ಎಂದು ಹೇಳಲಾಗಿದೆ, ಹೀಗಾಗಿ ಸಚಿವರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಹಿರಿಯ ಕೆಎಎಸ್ ಅಧಿಕಾರಿ ನೂರ್ ಅಹ್ಮದ್ ಎಂಬುವರನ್ನು ಮಹಾನಗರ ಪಾಲಿಕೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಬೇಕು ಎಂದು ಸಚಿವರು ನಿರ್ಧರಿಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಆದರೆ, ಈ ಭಾಗದ ಕಾಂಗ್ರೆಸ್‌ನ ಕೆಲ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ತಾವು ಹೇಳಿದ ಅಧಿಕಾರಿಯನ್ನೇ ಆಯುಕ್ತರನ್ನಾಗಿ ನೇಮಿಸಬೇಕು ಎಂದು ಪಟ್ಟು ಹಿಡಿದಿರುವುದರಿಂದ ಸಚಿವರು ಯಾವುದೇ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಪಾಲಿಕೆ ಸದಸ್ಯರೊಬ್ಬರು ಹೇಳಿದರು.

ಈ ನಡುವೆ, ಆಯುಕ್ತರ ಹುದ್ದೆಗೆ ಹಲವು ಹಿರಿಯ ಅಧಿಕಾರಿಗಳ ಹೆಸರು ಸಹ ಕೇಳಿ ಬರುತ್ತಿವೆ. ಈ ಹಿಂದೆ ಇಲ್ಲಿ ಆಯುಕ್ತರಾಗಿದ್ದ ವೈ.ಎಸ್.ಪಾಟೀಲ ಹಾಗೂ ಮತ್ತೊಬ್ಬ ಕೆಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಹೆಸರುಗಳು ಕೇಳಿ ಬರುತ್ತಿವೆ.
ವೈ.ಎಸ್.ಪಾಟೀಲ ಅವರು ಪುನಃ ಮಹಾನಗರ ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸಲು ಆಸಕ್ತಿ ತೋರಿಸಿಲ್ಲ ಎನ್ನಲಾಗುತ್ತಿದ್ದರೆ, ಮಹಾಂತೇಶ ಬೀಳಗಿ ಅವರ ಅಭಿಪ್ರಾಯವೂ ಇದೇ ಆಗಿದೆ ಎಂದು ಈ ಸದಸ್ಯರು ಹೇಳಿದರು.

‘ಪಾಲಿಕೆಗೆ ಪೂರ್ಣಾವಧಿ ಆಯುಕ್ತರನ್ನು ನೇಮಕ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದೇನೆ. ಆದರೆ, ಈ ವಿಷಯದಲ್ಲಿ ಸಚಿವರು ಯಾಕೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ’ ಎಂದು ಮೇಯರ್ ಶಿವು ಹಿರೇಮಠ ಪ್ರತಿಕ್ರಿಯಿಸಿದರು.

ಪೂರ್ಣಾವಧಿ ಆಯುಕ್ತರಿಲ್ಲದೇ ಸಮಸ್ಯೆ ಆಗುತ್ತಿದೆ. ಅಭಿವೃದ್ಧಿ ಕಾರ್ಯಗಳು ಸರಿಯಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಹೀಗಾಗಿ ಆಯುಕ್ತರನ್ನು ನೇಮಕ ಮಾಡುವಂತೆ ಬಿಜೆಪಿ ಹಾಗೂ ಕೆಲವು ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿವೆ.

ಆಯುಕ್ತರಿಲ್ಲದ ಕಾರಣ ಕೆಲವು ಆಡಳಿತಾತ್ಮಕ ವಿಷಯಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧ್ಯವಾಗುತ್ತಿಲ್ಲ ಎಂದು ಸ್ವತಃ ಪಾಲಿಕೆ ಸದಸ್ಯರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

‘ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಸಲುವಾಗಿ ಪ್ರತಿ ವಾರ್ಡ್‌ಗೆ ₨ 15 ಲಕ್ಷ ಬಿಡುಗಡೆ ಮಾಡುವುದಾಗಿ ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ನಂತರ ನಡೆದ ಎರಡನೇ ಸಾಮಾನ್ಯ ಸಭೆಯಲ್ಲಿ ಪ್ರಕಟಿಸಲಾಗಿತ್ತು. ಈ ವರೆಗೂ ಈ ಅನುದಾನ ಬಿಡುಗಡೆಯಾಗಿಲ್ಲ. 13ನೇ ಹಣಕಾಸು ಯೋಜನೆಯ ಅನುದಾನಕ್ಕೂ ಇದೇ ಗತಿ ಬಂದಿದೆ. ಸಂಬಂಧಪಟ್ಟ ಕಡತಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿವೆ. ಅವರೊಂದಿಗೆ ಚರ್ಚಿಸಿ, ಅಗತ್ಯವಿರುವ ಬದಲಾವಣೆಗಳನ್ನು ಮಾಡುವುದು, ನಗರಾಭಿವೃದ್ಧಿ ಇಲಾಖೆಯಿಂದ ಅನುಮೋದನೆ ಪಡೆಯುವುದು, ಅನುದಾನ ಬಿಡುಗಡೆಗೆ ಪ್ರಯತ್ನಿಸುವ ಕೆಲಸಕ್ಕೆ ಆಯುಕ್ತರು ಅಗತ್ಯ’ ಎಂದು ಪಾಲಿಕೆಯ ವಿರೋಧ ಪಕ್ಷದ ನಾಯಕ ಯಾಸಿನ್ ಹಾವೇರಿಪೇಟ ಹೇಳಿದರು.

‘ಶೀಘ್ರವೇ ಆಯುಕ್ತರನ್ನು ನೇಮಕ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದೇವೆ. ಅವರೇ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.