ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ 27 ರಿಂದ ಧರಣಿ

Last Updated 22 ಫೆಬ್ರುವರಿ 2012, 7:30 IST
ಅಕ್ಷರ ಗಾತ್ರ

ಧಾರವಾಡ: `ಶಿಕ್ಷಕರಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಫೆ. 27 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಯಾವುದೇ ತೊಂದರೆಯಾಗದಂತೆ ಸತ್ಯಾಗ್ರಹ ನಡೆಸುತ್ತೇವೆ” ಎಂದು ಮಾಜಿ ಉಪಸಭಾಪತಿ ಪುಟ್ಟಣ್ಣ ಹೇಳಿದರು.

ರಾಜ್ಯ ಅನುದಾನ ರಹಿತ ಶಿಕ್ಷಕರು ಅನುದಾನ ಬಿಡುಗಡೆಗೆ ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಎದುರು ಕಳೆದ 29 ದಿನಗಳಿಂದ ಆಮರಣ ಉಪವಾಸ ಸತ್ಯಾಗ್ರಹ ಹಾಗೂ 69 ದಿನಗಳಿಂದ ನಡೆಸಿರುವ ಸತ್ಯಾಗ್ರಹ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಜೊತೆಗೆ ಮಂಗಳವಾರ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಸುಳ್ಳು ಹೇಳುತ್ತಲೇ ಆಡಳಿತ ನಡೆಸುತ್ತಿದೆ. ಬಸವರಾಜ ಹೊರಟ್ಟಿ ಅವರು ಶಿಕ್ಷಣ ಸಚಿವರಿದ್ದಾಗ ಅನುದಾನಕ್ಕಾಗಿ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿತ್ತು. ಆದರೆ ಈ ಸರ್ಕಾರ ಆರ್ಥಿಕ ಮಿತವ್ಯಯದ ಕಾರಣ ನೀಡುತ್ತಿರುವುದು ಸರಿಯಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

`ಹಲವು ದಿನಗಳಿಂದ ಶಿಕ್ಷಕರು ಅನುದಾನ ಬಿಡುಗಡೆಗೆ ಸತ್ಯಾಗ್ರಹ ನಡೆಸಿದ್ದರೂ ಸರ್ಕಾರ ಈವರೆಗೆ ಸ್ಪಂದಿಸದಿರುವುದು ನಾಚಿಗೇಡಿನ ಸಂಗತಿ. ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕೇವಲ ಭರವಸೆ ನೀಡುತ್ತಿದ್ದಾರೆ ಹೊರತು ಸ್ಪಷ್ಟವಾದ ಆದೇಶ ನೀಡುತ್ತಿಲ್ಲ. ಅನುದಾನ ಬಿಡುಗಡೆ ಮಾಡುವವರಿಗೆ ರಾಜ್ಯದ ಎಲ್ಲೆಡೆ ಹೋರಾಟ ನಡೆಯಲಿದೆ~ ಎಂದು ಮರಿತಿಬ್ಬೇಗೌಡ ಹೇಳಿದರು.

ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿಕ್ಷಣ ಸಚಿವರಾದಾಗಿನಿಂದ ಶಿಕ್ಷಕರನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ಇದಲ್ಲದೇ ವಿದ್ಯಾರ್ಥಿಗಳ ಬೇಡಿಕೆಗಳಿಗೂ ಸಹ ಅವರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಪಾದಿಸಿದರು.
ಮಾಜಿ ಸಚಿವ ಬಸವರಾಜ ಹೊರಟ್ಟಿ, ಎನ್.ಎಚ್.ಕೋನರಡ್ಡಿ, ಸುರೇಶ ಹಿರೇಮಠ, ಮುತ್ತುರಾಜ ಮತ್ತಿಕೊಪ್ಪ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಬೆಂಬಲ: ಮಾಜಿ ಸಚಿವ ಬಸವರಾಜ ಹೊರಟ್ಟಿ ಹಾಗೂ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ಶಿಕ್ಷಕರ ಬೆಂಗಳೂರು ಚಲೋ ಪಾದಯಾತ್ರೆ ಕಾರ್ಯಕ್ರಮಕ್ಕೆ ಜಾತ್ಯತೀತ ಜನತಾ ದಳದ ಶಹರ ಘಟಕ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT