ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುತ್ತೂರು ಜಾತ್ರೆ 19ರಿಂದ

Last Updated 15 ಜನವರಿ 2012, 8:50 IST
ಅಕ್ಷರ ಗಾತ್ರ

ಧಾರವಾಡ: `ಧಾರ್ಮಿಕ, ಸಾಂಸ್ಕೃತಿಕ ಉತ್ಸವಗಳ ಸಂಗಮವಾದ ಮೈಸೂರು ಜಿಲ್ಲೆಯ ಸುತ್ತೂರು ಮಠದ ಜಾತ್ರಾ ಮಹೋತ್ಸವ ಜ.19 ರಿಂದ 24 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ~  ಎಂದು ಮಲೆಯೂರು ಗುರುಸ್ವಾಮಿ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸುತ್ತೂರ ಮಠದ ಜಾತ್ರೆ ಕೇವಲ ಧಾರ್ಮಿಕ ಉತ್ಸವದ ಜಾತ್ರೆಯಾಗಿಲ್ಲ. ಅದು ಸಾಂಸ್ಕೃತಿಕ, ಜಾನಪದ, ದನಗಳ ಜಾತ್ರೆ, ವಸ್ತು ಪ್ರದರ್ಶನ, ಭಜನಾಮೇಳ, ರಸಪ್ರಶ್ನೆ, ರಂಗೋಲಿ, ಚಿತ್ರಕಲಾ, ಗಾಳಿಪಟ ಸ್ಪರ್ಧೆಗಳು ನಡೆಯುತ್ತವೆ. ಬೇರೆ ರಾಜ್ಯದ ನೃತ್ಯಕಲಾ ತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ. ಪೌರಾಣಿಕ ನಾಟಕಗಳ ಪ್ರದರ್ಶನ ಸಹ ನಡೆಯಲಿದ್ದು, ರಾಜ್ಯದ ಬೇರೆ ಬೇರೆ ಭಾಗದ ಕಲಾವಿದರು ಭಾಗವಹಿಸಲು ಅವಕಾಶವಿದೆ ಎಂದರು.

ಕಳೆದ ಹನ್ನೆರಡು ವರ್ಷಗಳಿಂದ ಜಾತ್ರಾ ಮಹೋತ್ಸವದಲ್ಲಿ ಸಾಮೂ ಹಿಕ ವಿವಾಹಗಳನ್ನು ನಡೆಸಿಕೊಂಡು ಬರುತ್ತಿದ್ದು, ಈ ವರ್ಷವೂ ಕೂಡ 2000 ವಧು- ವರರು ದಾಂಪತ್ಯ ಜೀವನಕ್ಕೆ ಕಾಲಿರಿಸಲಿದ್ದಾರೆ. ಸಾರ್ವ ಜನಿಕರ ಅನುಕೂಲಕ್ಕಾಗಿ ವಿಷೇಶ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಜಾತ್ರಾಮಹೋತ್ಸವದಲ್ಲಿ ರಾಜ್ಯ ಪಾಲರು, ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಸಚಿವರು, ಸಾಹಿತಿಗಳು, ಕಲಾವಿದರು ಪಾಲ್ಗೊಳ್ಳ ಲಿದ್ದಾರೆ ಎಂದ ತಿಳಿಸಿದರು. ಜಾತ್ರಾ ಮಹೋತ್ಸವದ ಅಂಗವಾಗಿ ನಡೆ ಯುವ ಕೃಷಿ ಮೇಳದ ಬಗ್ಗೆ ವಿಷಯ ಪ್ರಸ್ತಾಪಿಸಿದ ಡಾ. ಅರುಣ ಬಾಳ ಮಟ್ಟಿ, ಈ ವರ್ಷದ ಕೃಷಿ ಮೇಳದಲ್ಲಿ ಜೈವಿಕ ಕೃಷಿ, ವಸ್ತುಪ್ರದರ್ಶನ, ಕೃಷಿ ಯಂತ್ರೋಪಕರಣ ಹಾಗೂ ಕೃಷಿಗೆ ಸಂಬಂಧಪಟ್ಟ ಮಾಹಿತಿಗಳು ಹಾಗೂ ಸಮಸ್ಯೆಗಳ ಕುರಿತು 5 ಅಂಶಗಳನ್ನು ಒಳಗೊಂಡ ವಿಚಾರಸಂಕಿರ್ಣ ನಡೆ ಯಲಿದೆ ಎಂದರು.
ಎಂ.ಪಿ.ಬಗಲಿ, ಎಸ್.ಎಂ.ಜಂಬು ಕೇಶ್ವರ, ಪ್ರತಿಭಾ ಜನಮಟ್ಟಿ ಪತ್ರಿಕಾ ಗೋಷ್ಠಿಯಲ್ಲಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT