ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಸ್ವರ್ಗ ಆಯ್ತಾ: ಯಡಿಯೂರಪ್ಪಗೆ ಸಿದ್ದರಾಮಯ್ಯ ಪ್ರಶ್ನೆ

Last Updated 25 ಫೆಬ್ರುವರಿ 2020, 7:15 IST
ಅಕ್ಷರ ಗಾತ್ರ

ವಿಜಯಪುರ:‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೆ ಕರ್ನಾಟಕ ಸ್ವರ್ಗ ಆಗುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಹಾಗಾದರೆ, ಕರ್ನಾಟಕ ಸ್ವರ್ಗ ಆಯ್ತಾ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಬಿಜೆಪಿಯ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ಸತ್ಯ. ಆದರೆ, ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಾರೆ' ಎಂದರು.

'ಕಾಂಗ್ರೆಸ್ ಮುಳುಗುತ್ತಿರುವ ಹಡಗು' ಎಂಬ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ, 'ಕಟೀಲ್ ಗೆ ರಾಜಕೀಯ ಜ್ಞಾನ ಇಲ್ಲ, ಅವರಿಗೆ ಅಧ್ಯಕ್ಷ ಸ್ಥಾನ ಹೇಗೆ ಕೊಟ್ಟರೋ ಗೊತ್ತಿಲ್ಲ' ಎಂದು ಲೇವಡಿ ಮಾಡಿದರು.

'ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಉತ್ತರ, ದಕ್ಷಿಣ ಕರ್ನಾಟಕದವರನ್ನು ಪರಿಗಣಿಸುವ ಸಂಬಂಧ ಚರ್ಚೆಗಳು ನಡೆದಿವೆ' ಎಂದು ಹೇಳಿದರು.

'ಡೊನಾಲ್ಡ್ ಟ್ರಂಪ್ ಗೆ ಭದ್ರತೆ ಕೊಡೋದು ತಪ್ಪಲ್ಲ. ಟ್ರಂಪ್ ಗೆ ತೋರಿಸಲು ಬಿಜೆಪಿ ಬಳಿ ಏನೂ ಇಲ್ಲ. ಅವರು ಅಭಿವೃದ್ಧಿಯನ್ನೇ ಮಾಡಿಲ್ಲ. ಹೀಗಾಗಿ, ತಾಜಮಹಲ್, ಸಾಬರಮತಿ ಆಶ್ರಮ ತೋರಿಸಿದ್ದಾರೆ' ಎಂದು ವ್ಯಂಗ್ಯವಾಡಿದರು.

'ಮಹದಾಯಿ ನೀರು ಹಂಚಿಕೆ ಸಂಬಂಧ ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಸಿಎಂ , ಸಂಸದರು ನಿಯೋಗ ತೆರಳಿ ಕೇಂದ್ರದ ಮೇಲೆ ಒತ್ತಡ ತರಬೇಕು' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT