ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕ ಭವನಕ್ಕೆ ₹1.5 ಕೋಟಿ: ಅಜಯಸಿಂಗ್‌

Last Updated 13 ಮಾರ್ಚ್ 2018, 10:41 IST
ಅಕ್ಷರ ಗಾತ್ರ

ಜೇವರ್ಗಿ: ಪಟ್ಟಣದಲ್ಲಿ ಕನಕ ಭವನ ನಿರ್ಮಾಣ ಕಾಮಗಾರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2017–18ನೇ ಸಾಲಿನಲ್ಲಿ ₹1.5 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ’ ಎಂದು ಶಾಸಕ ಡಾ.ಅಜಯಸಿಂಗ್ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ ಆಯೋಜಿಸಿದ್ದ ಕನಕ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಪ್ರಥಮ ಹಂತದಲ್ಲಿ ₹30 ಲಕ್ಷ ಅನುದಾನ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಜನಪರ, ರೈತಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. 27 ಲಕ್ಷ ರೈತರ ₹8 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದಾರೆ’ ಎಂದರು.

ತಿಂಥಣಿ ಕನಕ ಗುರುಪೀಠದ ಲಿಂಗ ಬೀರಣ್ಣ ದೇವರು ಸಾನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ ಶಾಂತಪ್ಪ ಕೂಡಲಗಿ, ಪುರಸಭೆ ಅಧ್ಯಕ್ಷೆ ಶರಣಮ್ಮ ಯಶವಂತರಾಯ ಕೋಳಕೂರ, ತಾ.ಪಂ. ಉಪಾಧ್ಯಕ್ಷ ಗೊಲ್ಲಾಳಪ್ಪ ಪೂಜಾರಿ ಕರಕಿಹಳ್ಳಿ, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ತಿಪ್ಪಣ್ಣ ಗುಂಡಗುರ್ತಿ, ತಾಲ್ಲೂಕು ಕುರುಬ ಸಂಘದ ಅಧ್ಯಕ್ಷ ನಿಂಗಣ್ಣ ಭಂಡಾರಿ, ಪುರಸಭೆ ಸದಸ್ಯ ರಾದ ಶರಣಗೌಡ ಸರಡಗಿ, ಮರೆಪ್ಪ ಸರಡಗಿ, ಮುಖಂಡರಾದ ಕಾಸಿಂ ಪಟೇಲ್ ಮುದವಾಳ, ರಾಜಶೇಖರ ಸೀರಿ, ದೇವಿಂದ್ರಪ್ಪ ಬಿರಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT