ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಕ್ಷ ಕಟ್ಟುವ ಕೆಲಸ ಮಾಡುವೆ’

Last Updated 17 ಮೇ 2018, 6:22 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಜನರು ನೀಡಿದ ತೀರ್ಪನ್ನು ಗೌರವದಿಂದ ಸ್ವೀಕರಿಸಿ ತಲೆಬಾಗುತ್ತೇನೆ. ಚುನಾವಣೆಯಲ್ಲಿ ಸೋಲು, ಗೆಲುವು ಸಹಜ’ ಎಂದು ಜೆಡಿಎಸ್ ಪರಾಜಿತ ಅಭ್ಯರ್ಥಿ ಆರ್.ಎಂ. ಮಂಜುನಾಥಗೌಡ ಹೇಳಿದರು.

ಬುಧವಾರ ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ಷೇತ್ರದಲ್ಲಿ ಪಕ್ಷ ಕಟ್ಟುವ ಕೆಲಸ ಆಗಬೇಕು. ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲಾಗುವುದು. ದೇವೇಗೌಡ, ಕುಮಾರಸ್ವಾಮಿ ನನ್ನ ಮೇಲೆ ಬಹಳ ವಿಶ್ವಾಸ ಇಟ್ಟಿದ್ದರು. ಅದನ್ನು ಉಳಿಸಿಕೊಳ್ಳಬೇಕು. ಮತದಾರರ ವಿಶ್ವಾಸ ಗಳಿಸಲು ತೀರ್ಥಹಳ್ಳಿಯಲ್ಲಿಯೇ ಇರಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ಹೇಳಿದರು.

‘ಆರಗ ಜ್ಞಾನೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಆಗಲಿ. ಅನುಭವಿ ರಾಜಕಾರಣಿಯಾಗಿದ್ದರಿಂದ ಎಲ್ಲರನ್ನು ಪ್ರೀತಿ, ವಿಶ್ವಾಸದಿಂದ ತೆಗೆದುಕೊಂಡು ಹೋಗುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಮಂಜುನಾಥ ಗೌಡ ತಿಳಿಸಿದರು.

‘ಚುನಾವಣೆ ನಂತರ ಅಲ್ಲಲ್ಲಿ ನಮ್ಮ ಕಾರ್ಯಕರ್ತರನ್ನು ಬೆದರಿಸುವ, ಹಲ್ಲೆ ಪ್ರಕರಣಗಳು ನಡೆಯುತ್ತಿವೆ. ಇದು ಆಗಬಾರದು. ಯಾವುದೇ ಸಂದರ್ಭದಲ್ಲಿಯೂ ಪಕ್ಷದ ಕಾರ್ಯಕರ್ತರಿಗೆ ರಕ್ಷಣೆ ಕೊಡುವ ಕೆಲಸವನ್ನು ಮಾಡುತ್ತೇನೆ. ಯಾವುದೇ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ಶಾಂತಿ, ಸೌಹಾರ್ದ ವಾತಾವರಣ ಮೂಡುವಂತಾಗಬೇಕು. ಗಲಾಟೆ ಮಾಡುವವರಿಂದಲೇ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ನಡೆಯುತ್ತಿದೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಆರ್.ಮದನ್, ಪಕ್ಷದ ಚುನಾವಣಾ ಉಸ್ತುವಾರಿ ಅಧ್ಯಕ್ಷ ಟಿ.ಎಲ್.ಸುಂದರೇಶ್, ಮಹಿಳಾ ಘಟಕದ ಅಧ್ಯಕ್ಷೆ ವಿನಂತಿ ಕರ್ಕಿ, ಮುಖಂಡರಾದ ಬೆಟ್ಟಮಕ್ಕಿ ಕೃಷ್ಣಮೂರ್ತಿ ಭಟ್, ಕುಣಜೆ ಕಿರಣ್ ಪ್ರಭಾಕರ್, ಕೊಲ್ಲೂರಯ್ಯ, ಶಚ್ಚೀಂದ್ರ ಹೆಗ್ಡೆ, ಕಟ್ಟೆಹಕ್ಕಲು ಕಿರಣ್, ರಾಘವೇಂದ್ರ ಶೆಟ್ಟಿ, ಸುಷ್ಮಾ ಸಂಜಯ್ ಇದ್ದರು.

**
ಹೆಚ್ಚು ಮತಗಳು ಬರಬೇಕಿದ್ದ ಮತಗಟ್ಟೆಗಳಲ್ಲಿ ಜೆಡಿಎಸ್‌ಗೆ ಅತಿ ಕಡಿಮೆ ಮತಗಳು ಬಂದಿರುವುದನ್ನು ಗಮನಿಸಿದರೆ ಮತಯಂತ್ರದ ಬಗ್ಗೆ ಅನುಮಾನ ಮೂಡುತ್ತದೆ
– ಮಂಜುನಾಥಗೌಡ, ಜೆಡಿಎಸ್‌ ನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT