ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔಷಧೋಪಕರಣ ಕೊರತೆ ನೀಗಿಸಿ: ಸಚಿವ ಸಿ.ಸಿ.ಪಾಟೀಲ ಸೂಚನೆ

ವಿಡಿಯೊ ಸಂವಾದದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ
Last Updated 3 ಏಪ್ರಿಲ್ 2020, 13:19 IST
ಅಕ್ಷರ ಗಾತ್ರ

ವಿಜಯಪುರ: ಅಕ್ಕಪಕ್ಕದ ಜಿಲ್ಲೆಗಳಿಗೂ ಕೊರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ಜಿಲ್ಲೆಯಲ್ಲಿ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಅವಶ್ಯಕ ಔಷಧ, ವೈದ್ಯಕೀಯ ಉಪಕರಣಗಳು ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟಿಲ ಜಿಲ್ಲಾಡಳಿತಕ್ಕೆ ಸೂಚಿಸಿದರು.

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಶುಕ್ರವಾರ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನಿರಾಶ್ರಿತರಿಗೆ, ಬಡಕಾರ್ಮಿಕರಿಗೆ, ನಿರ್ಗತಿಕರಿಗೆ ವಸತಿ ಮತ್ತು ಆಹಾರದ ವ್ಯವಸ್ಥೆ ಮಾಡಬೇಕು ಹಾಗೂ ಅಗತ್ಯ ಬಿದ್ದಲ್ಲಿ ಸರ್ಕಾರೇತರ ಸಂಘ ಸಂಸ್ಥೆಗಳ ನೆರವನ್ನು ಪಡೆಯಬೇಕು ಎಂದು ಸೂಚಿಸಿದರು.

ಕೊರೊನಾ ಸೋಂಕಿನ ಕುರಿತು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ತೀವ್ರ ನಿಗಾ ಇಡಬೇಕು. ಆಯಾ ಗ್ರಾಮ ಪಂಚಾಯ್ತಿಗಳ ಪಿಡಿಒಗಳು 24X7 ಮೊಬೈಲ್ ಚಾಲ್ತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದರು.

ದೆಹಲಿಯ ನಿಜಾಮುದ್ದೀನ್‌ ತಬ್ಲೀಗ್‌ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಗೆ ಬಂದಿರುವ 29 ಜನರ ಮೇಲೆ ಪ್ರತ್ಯೇಕ ನಿಗಾ ಹಾಗೂ ಕಾಳಜಿ ವಹಿಸುವಂತೆ ತಿಳಿಸಿದರು.

ಕೋವಿಡ್-19 ಬಾಧಿತ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದಿರುವ ಜನರನ್ನು ಹೋಂ ಕ್ವಾರಂಟೈನ್‍ನಲ್ಲಿಟ್ಟು ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯಿಂದ ತೀವ್ರ ನಿಗಾ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ, ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ವಿಡಿಯೊ ಸಂವಾದದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT