ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ವಿವಿಯಿಂದ ದೂರಶಿಕ್ಷಣ ಮುಂದುವರಿಕೆ

Last Updated 18 ಡಿಸೆಂಬರ್ 2019, 14:27 IST
ಅಕ್ಷರ ಗಾತ್ರ

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯವು ನಡೆಸುತ್ತಿರುವ ದೂರಶಿಕ್ಷಣ ಕೋರ್ಸ್‍ಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸುವ ಕುರಿತು ಉನ್ನತ ಶಿಕ್ಷಣ ಪರಿಷತ್ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳಲಾಗಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಆತಂಕಗೊಳ್ಳುವ ಅವಶ್ಯಕತೆಯಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ನಡೆದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಭೆಯಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಗಳಲ್ಲಿ ನಡೆಯುತ್ತಿರುವ ದೂರಶಿಕ್ಷಣ ಕೋರ್ಸ್‍ಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಹಾಗೂ ತಾನು ಮಾತ್ರ ದೂರಶಿಕ್ಷಣ ನೀಡಲು ಅನುಮತಿ ನೀಡಬೇಕೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿ ಶಿಕ್ಷಣ ಇಲಾಖೆ ತಾತ್ವಿಕ ಒಪ್ಪಿಗೆ ನೀಡಿದೆ ಎಂಬ ವರದಿಗಳು ಮಾಧ್ಯಮದಲ್ಲಿ ಪ್ರಕಟವಾಗಿವೆ.

ಈ ಸಭೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕುಲಸಚಿವರು ಭಾಗವಹಿಸಿದ್ದು, ಎಲ್ಲ ವಿಶ್ವವಿದ್ಯಾಲಗಳ ದೂರಶಿಕ್ಷಣ ಕೋರ್ಸ್‍ಗಳ ರದ್ಧತಿ ಬಗ್ಗೆ ಕೇವಲ ಚರ್ಚೆ ನಡೆದಿದ್ದು, ಯಾವುದೇ ನಿರ್ಣಯಕ್ಕೆ ಬಂದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ಎಲ್ಲ ದೂರಶಿಕ್ಷಣ ಕೋರ್ಸ್‍ಗಳನ್ನು ಮೊದಲಿನಂತೆಯೇ ಮುಂದುವರಿಸಲಾಗುವುದು ಹಾಗೂ ಮುಂದಿನ ಐದು ವರ್ಷಗಳಿಗೆ ವಿಶ್ವವಿದ್ಯಾಲಯದ ಎಲ್ಲ ದೂರಶಿಕ್ಷಣ ಕೋರ್ಸ್‍ಗಳಿಗೆ ಯುಜಿಸಿ ಮತ್ತು ಕರ್ನಾಟಕ ಸರ್ಕಾರದ ಅನುಮತಿಯಿದೆ. ವಿದ್ಯಾರ್ಥಿಗಳು ಈ ಸಂಬಂಧ ಆತಂಕಗೊಳ್ಳುವ ಅಗತ್ಯವಿಲ್ಲ ಎಂದುಕುಲಪತಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT