ಬುಧವಾರ, ಜೂನ್ 23, 2021
30 °C

‘ಅಂಬೇಡ್ಕರ್ ಚಿಂತನೆ ಪ್ರಸ್ತುತ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರದ ದಲಿತ ವಿದ್ಯಾರ್ಥಿ ಪರಿಷತ್‌ನ ಪ್ರಧಾನ ಕಚೇರಿಯಲ್ಲಿ ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಡಾ.ಬಿ.ಆರ್‌.ಅಂಬೇಡ್ಕರ್ ಅವರ 129ನೇ ಜಯಂತಿ ಆಚರಿಸಲಾಯಿತು.

ವಕೀಲ ಶ್ರೀನಾಥ ಪೂಜಾರಿ ಮಾತನಾಡಿ, ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಡಿ, ಸಂವಿಧಾನದ ಮೂಲಕ ವಿಶ್ವದ ದೊಡ್ಡ ಪ್ರಜಾಪ್ರಭುತ್ವಕ್ಕೆ ಅಂಬೇಡ್ಕರ್ ರೂಪು ನೀಡಿದ್ದರೆ ಎಂದರು.

ಟಿ.ಎಸ್.ಎಸ್ ಮುಖಂಡರಾದ ಇರ್ಫಾನ್ ಶೇಖ್ ಮಾತನಾಡಿ, ಕತ್ತಲು ಕವಿದಂತಿರುವ ಇಂದಿನ ಭಾರತವನ್ನು ಸಮಾನತೆ, ಸೌಹಾರ್ದತೆ ಮತ್ತು ಸಮೃದ್ಧಿಯ ಬೆಳಕಿನೆಡೆಗೆ ಕೊಂಡೊಯ್ಯಲು ಅಂಬೇಡ್ಕರ್ ಚಿಂತನೆಗಳಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ಪರಿಷತ್‌ನ ಮುಖಂಡರಾದ ರಾಕೇಶ್ ಕುಮಟಗಿ, ಅಜಿತ್, ರೊಹಿತ ಕುಲಕರ್ಣಿ, ಮಾಧವ ಹಾಗೂ ಸಂಗೊಳ್ಳಿ ರಾಯಣ್ಣ ವಿದ್ಯಾರ್ಥಿ ವೇದಿಕೆ ಅಧ್ಯಕ್ಷ ರವಿ ಪೂಜಾರಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು