ನೈಸರ್ಗಿಕವಾಗಿ ದೊರೆಯುವ ಹಣ್ಣು ತಿನ್ನಿ

7
ಮಕ್ಕಳಿಗೆ ಹಣ್ಣುಗಳ ಬಗ್ಗೆ ಅರಿವು ಮೂಡಿಸಿದ ಶಾಲೆ

ನೈಸರ್ಗಿಕವಾಗಿ ದೊರೆಯುವ ಹಣ್ಣು ತಿನ್ನಿ

Published:
Updated:
Deccan Herald

ಚನ್ನಪಟ್ಟಣ: ಪಟ್ಟಣದ ಗ್ಲೋಬಲ್ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಮಕ್ಕಳಿಗಾಗಿ ‘ಹಣ್ಣುಗಳ ಬಗ್ಗೆ ಅರಿವು’ (ಫ್ರೂಟ್ಸ್ ಫೀಸ್ಟ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಾಲೆಗೆ ವಿವಿಧ ಹಣ್ಣುಗಳನ್ನು ತಂದು ಅವುಗಳನ್ನು ಸಣ್ಣಸಣ್ಣ ಚೂರುಗಳಾಗಿ ಕತ್ತರಿಸಿ ಮಕ್ಕಳಿಗೆ ಅವುಗಳ ಮಹತ್ವವನ್ನು ತಿಳಿಸಿಕೊಟ್ಟು ನೈಸರ್ಗಿಕವಾಗಿ ದೊರೆಯುವ ಹಣ್ಣುಗಳನ್ನು ತಿಂದು ಆರೋಗ್ಯ ಕಾಪಾಡಿಕೊಳ್ಳುವಂತೆ ತಿಳಿಸಲಾಯಿತು.

ವಿದ್ಯಾಸಂಸ್ಥೆ ಅಧ್ಯಕ್ಷ ಅಲ್ಲಾ ಬಖಾಸ್ ಘೋರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಚಿಕ್ಕಮಕ್ಕಳು ಜಂಕ್ ಫುಡ್ ಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಇದರಿಂದ ಮಕ್ಕಳ ಆರೋಗ್ಯ ಹದಗೆಡುತ್ತಿದೆ ಎಂದು ತಿಳಿಸಿದರು.

ನೈಸರ್ಗಿಕವಾಗಿ ದೊರೆಯುವ ಹಣ್ಣುಗಳನ್ನು ಮಕ್ಕಳು ತಿನ್ನಲು ಇಷ್ಟ ಪಡುವುದಿಲ್ಲ. ಹಣ್ಣುಗಳ ಮಹತ್ವದ ಬಗ್ಗೆ ಮಕ್ಕಳಿಗೆ ಅರಿವು ಇಲ್ಲದಿರುವುದರಿಂದ ಮಕ್ಕಳು ಹಣ್ಣನ್ನು ತಿನ್ನಲು ಇಷ್ಟ ಪಡುವುದಿಲ್ಲ ಎಂದರು.

ಮಕ್ಕಳಿಗೆ ಹಣ್ಣಿನ ಮಹತ್ವವನ್ನು ತಿಳಿಸಲೆಂದೆ ಪ್ರತಿ ವರ್ಷ ಶಾಲೆಯಿಂದ ಫ್ರೂಟ್ ಫೀಸ್ಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಮಕ್ಕಳಿಗೆ ಹಣ್ಣುಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಯಾವ ಯಾವ ಹಣ್ಣುಗಳನ್ನು ತಿಂದರೆ ಎಷ್ಟು ಒಳ್ಳೆಯದಾಗುತ್ತದೆ ಎಂಬುದನ್ನು ತಿಳಿಸಿಕೊಡಲಾಗುತ್ತಿದೆ. ಚಿಕ್ಕಮಕ್ಕಳಿಗೆ ಶಿಕ್ಷಕರ ಮೂಲಕ ಅರಿವು ಮೂಡಿಸಿದರೆ ಅವರ ಮನಸ್ಸಿಗೆ ತಟ್ಟುತ್ತದೆ ಎಂದು ಅಭಿಪ್ರಾಯಪಟ್ಟರು.

ಮಕ್ಕಳು ಮನೆಯಲ್ಲಿ ತಮ್ಮ ಪೋಷಕರಿಗೂ ಇದರ ಬಗ್ಗೆ ತಿಳಿಸಿಕೊಡುತ್ತಾರೆ. ಈ ಕಾರ್ಯಕ್ರಮದಿಂದ ಮಕ್ಕಳಿಗೆ ಬಹಳಷ್ಟು ಅನುಕೂಲವಾಗುತ್ತಿದೆ ಎಂದು ತಿಳಿಸಿದರು.

ನಂತರ ಹಣ್ಣುಗಳನ್ನು ಮಕ್ಕಳಿಗೆ ಕೊಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !