23ರಂದು ಮತ ಎಣಿಕೆ: ಸಂಜೆ 4ರ ಒಳಗೆ ಫಲಿತಾಂಶ

ಬುಧವಾರ, ಜೂನ್ 19, 2019
26 °C
8 ವಿಧಾನಸಭಾ ಕ್ಷೇತ್ರಗಳಿಂದ 126 ಟೇಬಲ್‌ ಅಳವಡಿಕೆ, ಬೆಳಿಗ್ಗೆ 8ಕ್ಕೆ ಎಣಿಕೆ ಆರಂಭ

23ರಂದು ಮತ ಎಣಿಕೆ: ಸಂಜೆ 4ರ ಒಳಗೆ ಫಲಿತಾಂಶ

Published:
Updated:
Prajavani

ಶಿವಮೊಗ್ಗ: ಲೋಕಸಭಾ ಚುನಾವಣಾ ಫಲಿತಾಂಶ ಮೇ 23ರಂದು ಸಂಜೆ 4ರ ಒಳಗೆ ಬಹಿರಂಗವಾಗಲಿದೆ. ಅಂದು ಬೆಳಿಗ್ಗೆ 8ರಿಂದ ಮತ ಎಣಿಕೆಗೆ ಕಾರ್ಯ ಆರಂಭವಾಗಲಿದ್ದು, ಸಹ್ಯಾದ್ರಿ ಕಾಲೇಜು ಕೊಠಡಿಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರತಿ ವಿಧಾನಸಭಾ ಕ್ಷೇತ್ರದ ಎಣಿಕೆಗೆ 14 ಟೇಬಲ್‌ ವ್ಯವಸ್ಥೆ ಮಾಡಲಾಗಿದೆ. 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 15 ಕೊಠಡಿಗಳಲ್ಲಿ ನಡೆಯಲಿದೆ. ಎಲ್ಲ ಕೊಠಡಿಗಳಿಂದ ಒಟ್ಟು 126 ಟೇಬಲ್‌ ಅಳವಡಿಸಲಾಗಿದೆ. ಪ್ರತಿ ಟೇಬಲ್‌ಗೂ ಒಬ್ಬರಂತೆ 126 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಮತ ಎಣಿಕೆ ಟೇಬಲ್‌ಗೂ ಒಬ್ಬರು ಮೇಲ್ವಿಚಾರಕರು, ಒಬ್ಬ ಸಹಾಯಕರು ಹಾಗೂ ಮೈಕ್ರೋ ಅಬ್ಸರ್ವರ್‌ಗಳನ್ನು ನೇಮಿಸಲಾಗಿದೆ. ಮತ ಎಣಿಕೆ ಸ್ಥಳದಲ್ಲಿ ಹಾಜರಿರಲು ಅಭ್ಯರ್ಥಿಗಳು, ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರಿಗೆ ಅವಕಾಶ ನೀಡಲಾಗಿದೆ.

ಅಂದು ಬೆಳಿಗ್ಗೆ 7ಕ್ಕೆ ಮತಯಂತ್ರಗಳನ್ನು ಇಟ್ಟಿರುವ ಭದ್ರತಾ ಕೊಠಡಿ ತೆರೆಯಲಾಗುತ್ತದೆ. ಈ ಸಮಯದಲ್ಲಿ ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರು ಕಡ್ಡಾಯವಾಗಿ ಹಾಜರಿರಬೇಕು. ಅಂಚೆ ಮತಗಳ ಎಣಿಕೆಯನ್ನೂ ಬೆಳಿಗ್ಗೆ 8ಕ್ಕೆ ಚುನಾವಣಾಧಿಕಾರಿ ಟೇಬಲ್‌ ಮೇಲೆ ಆರಂಭಿಸಲಾಗುತ್ತದೆ.

14 ಮತದಾನ ಕೇಂದ್ರಕ್ಕೆ ಒಂದು ಸುತ್ತಿನಂತೆ ಮತ ಎಣಿಕೆ ನಡೆಯಲಿದೆ. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗರಿಷ್ಠ 21 ಸುತ್ತು ಹಾಗೂ ಶಿಕಾರಿಪುರದಲ್ಲಿ ಕನಿಷ್ಠ 17 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಳ್ಳಲಿದೆ. ಮತ ಎಣಿಕೆ ಕೇಂದ್ರದೊಳಗೆ ಕಡ್ಡಾಯವಾಗಿ ಮೊಬೈಲ್ ನಿಷೇಧಿಸಲಾಗಿದೆ. ಮತ ಎಣಿಕೆ ಅಧಿಕಾರಿ ಹಾಗೂ ಸಿಬ್ಬಂದಿ ಬೆಳಿಗ್ಗೆ 7.30ರ ಒಳಗಾಗಿ ಮತ ಎಣಿಕೆ ಕೇಂದ್ರದಲ್ಲಿ ಹಾಜರಿರಲು ಸೂಚಿಸಲಾಗಿದೆ. ಅಭ್ಯರ್ಥಿಗಳ ಪರ ಏಜೆಂಟರು ಗುರುತಿನ ಚೀಟಿಯೊಂದಿಗೆ ಹಾಜರಾಗಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ವಿವರ ನೀಡಿದರು.

ಬಿಗಿ ಭದ್ರತೆ:

ಸುಗಮ ಮತ ಎಣಿಕೆಗೆ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1,019 ಪೊಲೀಸ್ ಅಧಿಕಾರಿ, ಸಿಬ್ಬಂದಿ, 521 ಗೃಹ ರಕ್ಷಕ ದಳದ ಸಿಬ್ಬಂದಿ, 5 ಕೆಎಸ್‍ಆರ್‌ಟಿಸಿ ತುಕಡಿ, 14 ಡಿಎಆರ್, 1 ಸಿಆರ್ಎಫ್ ಹಾಗೂ 1 ಎಸ್‌ಎಸ್‌ಬಿ ಕಂಪನಿ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ 490 ಪೊಲೀಸ್ ಅಧಿಕಾರಿ ಸಿಬ್ಬಂದಿ, 78 ಗೃಹ ರಕ್ಷಕ ದಳದ ಸಿಬ್ಬಂದಿ, 2 ಕೆಎಸ್‍ಆರ್‌ಪಿ ತುಕಡಿ, 4 ಡಿಎಆರ್ ಹಾಗೂ ಸಿಆರ್‌ಎಫ್ ಸಿಬ್ಬಂದಿ ಭದ್ರತಾ ವ್ಯವಸ್ಥೆ ನೋಡಿಕೊಳ್ಳಲಿದ್ದಾರೆ. ಮತ ಎಣಿಕೆ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅಶ್ವಿನಿ ಮಾಹಿತಿ ನೀಡಿದರು. 

ಮತ ಎಣಿಕೆ ಕೇಂದ್ರದ ಸುತ್ತಲೂ ಭಾರಿ ಭದ್ರತೆ ಒದಗಿಸಲಾಗಿದೆ. ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಆವರಣದ ಬಳಿ ವಿಜಯೋತ್ಸವ ಆವರಣೆಗೆ ನಿರ್ಬಂಧ ವಿಧಿಸಲಾಗಿದೆ ಎಂದರು.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !