ಮುಖ್ಯಮಂತ್ರಿ ಕೊಲೆಗೆ ಬಿಜೆಪಿ ಸಂಚು: ಡಿ.ಕೆ.ಶಿವಕುಮಾರ್ ಶಂಕೆ

ಮಂಗಳವಾರ, ಏಪ್ರಿಲ್ 23, 2019
27 °C

ಮುಖ್ಯಮಂತ್ರಿ ಕೊಲೆಗೆ ಬಿಜೆಪಿ ಸಂಚು: ಡಿ.ಕೆ.ಶಿವಕುಮಾರ್ ಶಂಕೆ

Published:
Updated:

ಶಿವಮೊಗ್ಗ: ಚುನಾವಣೆ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ನೆಗೆದು ಬೀಳುತ್ತಾರೆ ಎಂಬ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿಕೆ ಬಹುಶಃ ಕುಮಾರಸ್ವಾಮಿ ಕೊಲೆಗೆ ಬಿಜೆಪಿ ರೂಪಿಸಿದ ಸಂಚು ಇರಬಹುದು ಎಂದು ಸಚಿವ ಡಿ.ಕೆ.ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಹುಟ್ಟಿದ ಮೇಲೆ ಎಲ್ಲರೂ ಸಾಯಲೇಬೇಕು. ಆದರೆ, ಶಾಸಕ ಕೆ.ಎಸ್.ಈಶ್ವರಪ್ಪರ ಇಂತಹ ಹೇಳಿಕೆ ನೀಡಿರುವುದರ ಹಿಂದಿನ ಮರ್ಮ ಏನು ಎಂದು ಬಿಜೆಪಿ ಸ್ಪಷ್ಟಪಡಿಸಬೇಕು.

ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಡುತ್ತಿದ್ದರೂ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏಕೆ ಕಡಿವಾಣ ಹಾಕುತ್ತಿಲ್ಲ? ಇದೇನಾ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಂಸ್ಕೃತಿ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಮುಸ್ಲಿಮರು ಬಿಜೆಪಿಗೆ ಬೆಂಬಲಿಸದ ಕಾರಣ ಅವರಿಗೆ ಟಿಕೆಟ್ ನೀಡಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಚುನಾವಣೆ ಸಮಯದಲ್ಲಿ ಬಿಜೆಪಿ ಜಾತಿ, ಧರ್ಮಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !