ಪಾಲಿಕೆ ಚುನಾವಣೆ: ನೀತಿ ಸಂಹಿತೆ ಮೇಲೆ ಹದ್ದಿನ ಕಣ್ಣು

7

ಪಾಲಿಕೆ ಚುನಾವಣೆ: ನೀತಿ ಸಂಹಿತೆ ಮೇಲೆ ಹದ್ದಿನ ಕಣ್ಣು

Published:
Updated:

ಶಿವಮೊಗ್ಗ: ನಗರ ಪಾಲಿಕೆ ಚುನಾವಣೆ ಮುಗಿಯುವವರೆಗೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಣ್ಗಾವಲು ಇಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಸೂಚಿಸಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಅನುಷ್ಠಾನಕ್ಕಾಗಿ ಉಪ ವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ರಾಜಕೀಯ ಪಕ್ಷಗಳ ಫ್ಲೆಕ್ಸ್, ಬ್ಯಾನರ್‌ ತೆರವುಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಅನುಮತಿ ಇಲ್ಲದೆ ಯಾವುದೆ ಫ್ಲೆಕ್ಸ್, ಬ್ಯಾನರ್ ಅಳವಡಿಸಲು ಅವಕಾಶ ನೀಡಬಾರದು. ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ನಗರ ವ್ಯಾಫ್ತಿಯಲ್ಲಿರುವ ಎಲ್ಲಾ ಸರ್ಕಾರಿ ವಸತಿಗೃಹ ಆಯಾ ತಹಶೀಲ್ದಾರ್ ಅವರ ವಶಕ್ಕೆ ಒಪ್ಪಿಸಬೇಕು. ನಗರ ಪಾಲಿಕೆಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರ ವಾಹನಗಳನ್ನು ಹಿಂದಕ್ಕೆ ಪಡೆದು ಆಯುಕ್ತರ ವಶದಲ್ಲಿ ಇಟ್ಟುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ನಾಮಪತ್ರ ಸಲ್ಲಿಸುವ ಸಮಯದಲ್ಲಿ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. 1,500ಕ್ಕಿಂತ ಹೆಚ್ಚು ಮತದಾರರು ಇರುವ ಕೇಂದ್ರಗಳಲ್ಲಿ ಹೆಚ್ಚುವರಿ ಮತದಾನ ಕೇಂದ್ರ ತೆರೆಯುವ ಕುರಿತು ಪ್ರಸ್ತಾವ ಸಲ್ಲಿಸಬಹುದಾಗಿದೆ. ಎಲ್ಲಾ ಮತದಾನ ಕೇಂದ್ರಗಳಲ್ಲಿ ಕನಿಷ್ಠ ಮೂಲಸೌಕರ್ಯ ಖಾತ್ರಿಪಡಿಸಬೇಕು. ಮತದಾನ ಕೇಂದ್ರದ ಹೊರಗೆ ಹಾಗೂ ಚುನಾವಣಾಧಿಕಾರಿ ಕಾರ್ಯಾಲಯದ ಹೊರಗೆ ಫಲಕ ಅಳವಡಿಸುವಂತೆ ಸಲಹೆ ನೀಡಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !