ಬುಧವಾರ, ಡಿಸೆಂಬರ್ 11, 2019
27 °C

ಪಾರ್ಕಿಂಗ್ ಸ್ಥಳ ಒತ್ತುವರಿ ತೆರವು ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಶಿವಮೊಗ್ಗ: ಬೀದಿಬದಿ ವ್ಯಾಪಾರಿಗಳು ಹಾಗೂ ಪಾರ್ಕಿಂಗ್ ಸ್ಥಳ ಒತ್ತುವರಿ ವಿರುದ್ಧ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶುಕ್ರವಾರ ಕಾರ್ಯಾಚರಣೆ ನಡೆಸಿದರು.

ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಉಪ ಆಯುಕ್ತೆ ಡಾ.ಸಹನಾ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹಲವು ಬಹುಮಹಡಿ ಕಟ್ಟಡಗಳಲ್ಲಿನ ಪಾರ್ಕಿಂಗ್ ಜಾಗ ತೆರವುಗೊಳಿಸಲಾಯಿತು.

ಮೊದಲ ದಿನ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಜೈಲ್ ವೃತ್ತ, ತನಿಷ್ಕ, ನಾಗರಾಜ್ ನ್ಯೂರೋ ಆಸ್ಪತ್ರೆ, ರತ್ನಾ ಆರ್ಕೆಡ್ ಬಳಿ ಕಾರ್ಯಾಚರಣೆ ನೆಡೆಯಿತು. ಪಾದಾಚಾರಿ ರಸ್ತೆಯ ಮೇಲೆ ವಾಹನ ನಿಲ್ಲಿಸದಂತೆ ಹಾಗೂ ಪಾದಾಚಾರಿ ರಸ್ತೆಯನ್ನು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳದಂತೆ ಎಚ್ಚರಿಕೆ ನೀಡಲಾಯಿತು.

ಪಾರ್ಕಿಂಗ್‌ಗೆ ಮೀಸಲಿಟ್ಟ ಜಾಗ ಅತಿಕ್ರಮಣ ಮಾಡಿಕೊಂಡು ಅನ್ಯ ಉದ್ದೇಶಗಳಿಗೆ ಬಳಕೆ ಮಾಡುತ್ತಿದ್ದ 85 ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲಾಯಿತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು