ಗುರುವಾರ , ಡಿಸೆಂಬರ್ 12, 2019
17 °C

ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ. ಅದು ಅಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಸಿದ್ದರಾಮಯ್ಯ ಇನ್ನೆಂದು ರಾಜ್ಯದ ಮುಖ್ಯಮಂತ್ರಿ ಆಗುವುದಿಲ್ಲ. 2012–13ರಲ್ಲಿ ಬಿಜೆಪಿ ಒಡೆಯದಿದ್ದರೆ ಸಿದ್ದರಾಮಯ್ಯ ಎಲ್ಲಿ ಮುಖ್ಯಮಂತ್ರಿಯಾಗುತ್ತಿದ್ದರು. ಮತಗಳ ವಿಭಜನೆಯಿಂದ ಅವರಿಗೆ ಅಂತಹ ಅವಕಾಶ ದೊರೆಯಿತು. ಈಗ ತಿರುಕನ ಕನಸು ಕಾಣುತ್ತಿದ್ದಾರೆ. ಹಿಂದುಳಿದ ವರ್ಗದ ಜನರ ಶಾಪ ಸಿದ್ದರಾಮಯ್ಯರ ಮೇಲಿದೆ. ಅವರಿಗೆ ಮತ್ತೆ ಅಂಥ ಅವಕಾಶ ಸಿಗುವುದಿಲ್ಲ ಎಂದು ಕುಹಕವಾಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು