ಶುಕ್ರವಾರ, ಏಪ್ರಿಲ್ 3, 2020
19 °C

ಬೆಂಗಳೂರಿನಿಂದ ಹೊರಗೆ ಕೈಗಾರಿಕೆಗಳ ಸ್ಥಾಪನೆ: ಸಿಎಂ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಶಿವಮೊಗ್ಗ: ಬೆಂಗಳೂರಿನ ಹೊರಗೆ ಕೈಗಾರಿಕಾ ವಲಯಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ. ಅಂತಹ ಉದ್ಯಮಿಗಳಿಗೆ ನೆರವು, ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದ ಬೇರೆಬೇರೆ ಭಾಗಗಳಲ್ಲಿ ದೊಡ್ಡದೊಡ್ಡ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಸ್ಥಳೀಯರಿಗೆ ಉದ್ಯೋಗಾವಕಾಶ ದೊರಕಬೇಕು. ಕೃಷಿ ಮತ್ತು ಕೈಗಾರಿಕಾ ವಲಯ ಸಮಾನಾಂತರವಾಗಿ ಸಾಗಿದರೆ ನಿರುದ್ಯೋಗ ಸಮಸ್ಯೆ ನಿವಾರಣೆ ಜತೆಗೆ, ರಾಜ್ಯದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಟ್ರಂಪ್ ಭೇಟಿಗೆ ಗೈರು

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಭೇಟಿಗೆ ತಮಗೂ ಆಹ್ವಾನ ಬಂದಿದೆ. ಕೆಲಸ ಕಾರ್ಯಗಳ ಒತ್ತಡದಿಂದ ಅಲ್ಲಿಗೆ ಹೋಗುತ್ತಿಲ್ಲ. ವಿಶ್ವದ ಬಲಿಷ್ಠ ರಾಷ್ಟ್ರ ಅಮೆರಿಕ. ಮೋದಿ ಅವರ ವೈಯಕ್ತಿಕ ಸ್ನೇಹದ ಕಾರಣಕ್ಕೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಬರುವಿಕೆಗೆ ಸ್ವಾಗತ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು