ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಪೂರ್ವ ಸಮೀಕ್ಷೆ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿಗೆ ಹಿನ್ನಡೆ

Last Updated 25 ಮೇ 2018, 4:42 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದರೂ ಅಧಿಕಾರ ಹಿಡಿಯುವುದು ಸಾಧ್ಯವಾಗದಿರುವ ಬೆನ್ನಲೇ ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲೂ ಬಿಜೆಪಿಗೆ ಸೋಲುವ ಭೀತಿ ಎದುರಾಗಿದೆ ಎಂದು ಸಿಎಸ್‌ಡಿಎಸ್–ಲೋಕನೀತಿ ಸಮೀಕ್ಷೆ ತಿಳಿಸಿದೆ.

ಆಡಳಿತಾರೂಢ ಬಿಜೆಪಿ ಈ ಎರಡು ರಾಜ್ಯಗಳನ್ನು ಕಳೆದುಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಯಿಂದ ತಿಳಿದು ಬಂದಿದೆ.  ಸಿಎಸ್‌ಡಿಎಸ್–ಲೋಕನೀತಿ ನಡೆಸಿದ ಸಮೀಕ್ಷೆಯಲ್ಲಿ ಈ ಎರಡು ರಾಜ್ಯಗಳಲ್ಲಿ ಮತದಾರ ಬಿಜೆಪಿ ಪರವಾಗಿ ಇಲ್ಲ ಎಂದು ಹೇಳಿದೆ.

ರಾಜಸ್ಥಾನದಲ್ಲಿ  ಬಿಜೆಪಿಗೆ ಶೇ 39ರಷ್ಟು, ಕಾಂಗ್ರೆಸ್‌ಗೆ ಶೇ 49ರಷ್ಟು ಮತದಾರರು ಒಲವು ತೋರಿದ್ದಾರೆ. ಮಧ್ಯಪ್ರದೇಶದಲ್ಲಿ  ಶೇ 34ರಷ್ಟು ಜನರು ಬಿಜೆಪಿ ಪರವಾಗಿದ್ದರೆ, ಶೇ 44ರಷ್ಟು ಜನರು ಕಾಂಗ್ರೆಸ್ ಪರವಾಗಿದ್ದರೆ. ಈ ಎರಡು ರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್ ಪಕ್ಷ ಗೆಲ್ಲಿಸುವ ಮುನ್ಸೂಚನೆ ನೀಡಿದ್ದಾರೆ ಎಂದು ಸಿಎಸ್‌ಡಿಎಸ್–ಲೋಕನೀತಿ ತಿಳಿಸಿದೆ.

ಆಡಳಿತಾ ವಿರೋಧಿ ಅಲೆ ಇಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವರವಾಗಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT