ಶನಿವಾರ, ಏಪ್ರಿಲ್ 1, 2023
23 °C

ಮಿಮ್ಸ್‌ ಆಸ್ಪತ್ರೆ ಶೌಚಾಲಯದಲ್ಲಿ ಭ್ರೂಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ನಗರದ ಮಿಮ್ಸ್‌ ಆಸ್ಪತ್ರೆ, ತುರ್ತು ಚಿಕಿತ್ಸಾ ಘಟಕದ ಶೌಚಾಲಯದಲ್ಲಿ ಬುಧವಾರ ಭ್ರೂಣವೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ, ಭ್ರೂಣ ತೀರ ಚಿಕ್ಕದಾಗಿರುವ ಕಾರಣ ಲಿಂಗ ಪತ್ತೆಯಾಗಿಲ್ಲ.

ಶೌಚಾಲಯದಲ್ಲಿ ಬಳಸುವ ಸಣ್ಣ ಬಕೆಟ್‌ನಲ್ಲಿ ಭ್ರೂಣ ಕಂಡು ಬಂದಿದೆ. ಆಸ್ಪತ್ರೆ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸಲು ತೆರಳಿದ್ದಾಗ ಪತ್ತೆಯಾಗಿದೆ, ಅವರು ತಕ್ಷಣ ವೈದ್ಯರ ಗಮನಕ್ಕೆ ತಂದಿದ್ದಾರೆ. 10–12 ವಾರಗಳ ಭ್ರೂಣವಾಗಿದ್ದು ಗರ್ಭಿಣಿ ಶೌಚಾಲಯಕ್ಕೆ ತೆರಳಿದ್ದಾಗ ಗರ್ಭಪಾತವಾಗಿರಬಹುದು ಎಂದು ಶಂಕಿಸಲಾಗಿದೆ. ಸಮಗ್ರ ಪರೀಕ್ಷೆಯ ನಂತರ ಭ್ರೂಣದ ಲಿಂಗ ಪತ್ತೆಯಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಿಮ್ಸ್‌ ಆಸ್ಪತ್ರೆ ವೈದ್ಯರು ಪೂರ್ವ ಪೊಲೀಸ್‌ ಠಾಣೆಗೆ ದೂರು ನೀಡಿದ್ದು ಭ್ರೂಣವನ್ನು ಬಿಟ್ಟು ಹೋದವರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗಿದ್ದ ಗರ್ಭಿಣಿಯರ ಮಾಹಿತಿ ಸಂಗ್ರಹಿಸಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.

‘ಆಸ್ಪತ್ರೆ ದಾಖಲಾತಿ ಪ್ರಕಾರ ಮೂರು ದಿನಗಳಿಂದ ಯಾವುದೇ ಗರ್ಭಾಪಾತ ಪ್ರಕರಣಗಳಿಲ್ಲ. ಭ್ರೂಣ ಶೌಚಾಲಯಕ್ಕೆ ಹೇಗೆ ಬಂತು ಎಂಬುದು ತಿಳಿಯುತ್ತಿಲ್ಲ. ಪೊಲೀಸ್‌ ತನಿಖೆಯಿಂದಲೇ ತಿಳಿಯಬೇಕಾಗಿದೆ’ ಎಂದು ಮಿಮ್ಸ್‌ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು