ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ

Last Updated 20 ಜನವರಿ 2019, 16:19 IST
ಅಕ್ಷರ ಗಾತ್ರ

ಸಾಗರ: ಇಲ್ಲಿನ ನಗರಸಭೆ ಆವರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಶನಿವಾರ ಹೊಡೆದಾಟ ನಡೆದಿದ್ದು, ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿವೆ.

ರಾಜ್ಯ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಉರುಳಿಸಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಈಚೆಗೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ತಾಲ್ಲೂಕಿನಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿರುವಾಗ ಶಾಸಕ ಎಚ್.ಹಾಲಪ್ಪ ಹರತಾಳು ಅವರು ಹರಿಯಾಣದ ಗುರುಗ್ರಾಮದ ರೆಸಾರ್ಟ್‌ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಶಾಸಕರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ್ದರು.

ಈ ಹಿನ್ನೆಲೆಯಲ್ಲಿ ಶನಿವಾರ ನಗರಸಭೆ ಆವರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

‘ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಅರುಣ್ ಕುಗ್ವೆ, ಬಿ.ಟಿ. ರವೀಂದ್ರ, ಗಿರಿ ಸೂರನಗದ್ದೆ ಸೇರಿ 8 ಮಂದಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ನಗರ ಕಾಂಗ್ರೆಸ್ ಕಾರ್ಯದರ್ಶಿ ಅನ್ವರ್ ಬಾಷಾ ದೂರು ನೀಡಿದ್ದಾರೆ.

‘ಕಾಂಗ್ರೆಸ್‌ನ ಅನ್ವರ್ ಬಾಷಾ , ಪ್ರವೀಣ್ ಬಣಕಾರ್, ಜೆಡಿಎಸ್‌ನ ಸೈಯದ್ ಜಾಕೀರ್ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ’ ಎಂದು ಬಿಜೆಪಿ ಕಾರ್ಯಕರ್ತ ಶಶಿಕುಮಾರ್ ಪ್ರತಿದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT