ಗುರುವಾರ , ಆಗಸ್ಟ್ 18, 2022
26 °C

ಇ– ಸ್ಕೂಟರ್ ಶೋರೂಂಗೆ ಬೆಂಕಿ: 150ಕ್ಕೂ ಅಧಿಕ ಸ್ಕೂಟರ್‌ಗೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಗರದ ನಾಗುರಿಯಲ್ಲಿ ಶುಕ್ರವಾರ ಒಕಿನವಾ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗಳಿಗೆ ಬೆಂಕಿ ಬಿದ್ದ ಪರಿಣಾಮ 150ಕ್ಕೂ ಅಧಿಕ ಸ್ಕೂಟರ್‌ಗಳು ಸುಟ್ಟಿವೆ.

ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಮಳಿಗೆ ಸಿಬ್ಬಂದಿ, ಕೆಲಸಕ್ಕೆ ಬಂದಾಗ ಹೊಗೆ ಬರುತ್ತಿರುವುದು ಕಾಣಿಸಿದೆ. ನಂತರ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದರೂ, ಅಷ್ಟೊತ್ತಿಗಾಗಲೇ ಬೆಂಕಿಯ ಕೆನ್ನಾಲಿಗೆ ಮಳಿಗೆಯನ್ನು ಆವರಿಸಿತ್ತು. ಶೋರೂಂ ಮಾಲೀಕ ಪ್ರಶಾಂತ್ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.

‘ಮಂಗಳೂರಿನ ಶೋರೂಂನಲ್ಲಿ ಅಗ್ನಿ ಅನಾಹುತ ಸಂಭವಿಸಿರುವುದು ದುರದೃಷ್ಟಕರ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎಂದು ಡೀಲರ್ ತಿಳಿಸಿದ್ದಾರೆ. ಈ ಬಗ್ಗೆ ಡೀಲರ್‌ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಸುರಕ್ಷತೆ ಒಕಿನವದ ಆದ್ಯತೆಯಾಗಿದೆ. ನಮ್ಮ ಎಲ್ಲ ಡೀಲರ್‌ಶಿಪ್‌ಗಳಲ್ಲಿ ಅಧಿಕ ಗುಣಮಟ್ಟದ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ’ ಎಂದು ಒಕಿನವಾ ಆಟೊಟೆಕ್ ವಕ್ತಾರರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು