ಭಾನುವಾರ, ಅಕ್ಟೋಬರ್ 2, 2022
18 °C

ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ: ಒಬ್ಬ ಸಜೀವ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಪನಹಳ್ಳಿ (ವಿಜಯನಗರ ಜಿಲ್ಲೆ ): ಪಟ್ಟಣದ ಸಮೀಪದ ಬೆಂಡಿಗೇರಿ ರಸ್ತೆಯ ಕಣವಿ ಬಳಿ ಭಾನುವಾರ ಡೀಸೆಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಟ್ಯಾಂಕರ್ ಹಿಂದೆ ಬರುತ್ತಿದ್ದ ಬೈಕ್ ಸವಾರ ಸಜೀವವಾಗಿ ದಹನವಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮೋರಿಗೇರಿ ನಾಗರಾಜ್ (33) ಮೃತಪಟ್ಟವರು. ಲಾರಿ ಚಾಲಕ ಮಹಾದೇವಪ್ಪ ಮತ್ತು ಬೈಕ್‌ನ ಹಿಂಬದಿ ಸವಾರ ಚಂದ್ರು ಗಾಯಗೊಂಡಿದ್ದಾರೆ. ಚಂದ್ರು ಅವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹರಪನಹಳ್ಳಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಗುಡ್ಡದ ಇಳಿಜಾರಿನ ತಿರುವಿನಲ್ಲಿ ಪಲ್ಟಿಯಾಗಿದೆ. ಆಗ ಡೀಸೆಲ್‌ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಟ್ಯಾಂಕರ್ ಹಿಂದೆ ಬರುತ್ತಿದ್ದ ನಾಗರಾಜ್ ಅವರಿಗೆ ಬೆಂಕಿ ತಗುಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು