ತುಂಗಾ ನದಿಯಲ್ಲಿ ಮೀನುಗಳ ಮಾರಣಹೋಮ

ಶುಕ್ರವಾರ, ಮೇ 24, 2019
26 °C
ಅನಧಿಕೃತ ಮೀನುಗಾರರು ನದಿಗೆ ಮೈಲುತುತ್ತಾ ಹಾಕಿರುವ ಶಂಕೆ

ತುಂಗಾ ನದಿಯಲ್ಲಿ ಮೀನುಗಳ ಮಾರಣಹೋಮ

Published:
Updated:
Prajavani

ಶಿವಮೊಗ್ಗ: ತಾಲ್ಲೂಕಿನ ಮತ್ತೂರು ಮತ್ತು ಹೊಸಹಳ್ಳಿ ಭಾಗದ ತುಂಗಾ ನದಿಯಲ್ಲಿ ನೂರಾರು ಮೀನುಗಳು ಮೃತಪಟ್ಟಿದ್ದು, ಅವುಗಳನ್ನು ನೀರಿನಿಂದ ಹೊರತೆಗೆಯುವ ಕಾರ್ಯ ನಡೆಯುತ್ತಿದೆ. 

ವಿಷಪ್ರಾಶನದಿಂದ ಮೀನುಗಳು ಮೃತಪಟ್ಟಿರುವ ಸಾಧ್ಯತೆಯಿದ್ದು, ಅವುಗಳನ್ನು ಪರೀಕ್ಷೆಗಾಗಿ ಮಂಗಳೂರಿನ ಮೀನುಗಾರಿಕಾ ಕಾಲೇಜಿಗೆ ಕಳುಹಿಸಲಾಗಿದೆ. ಮಾರಾಟದ ಉದ್ದೇಶದಿಂದ ಕೆಲವು ಅನಧಿಕೃತ ಮೀನುಗಾರರು ತುಂಗಾ ನದಿಯೊಳಗೆ ಮೈಲುತುತ್ತಾ (ಬೋರ್ಡೆಕ್ಸ್) ಮಿಶ್ರಣ ಹಾಕಿ ಮೀನುಗಳನ್ನು ಕೊಂದಿರುವ ಸಾಧ್ಯತೆಯಿದೆ ಎಂದು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ಸಾಮಾನ್ಯವಾಗಿ ಕೀಟಗಳಿಂದ ರಕ್ಷಿಸಿಕೊಳ್ಳಲು ಬೋರ್ಡೆಕ್ಸ್ ಮಿಶ್ರಣವನ್ನು ಬೆಳೆ, ಗಿಡ, ಮರಗಳಿಗೆ ಸಿಂಪಡಿಸಲಾಗುತ್ತದೆ. ಇದರಲ್ಲಿ ತಾಮ್ರದ ಸಲ್ಫೇಟ್ ಮತ್ತು ಸುಣ್ಣದ ಅಂಶ ಇರುವುದರಿಂದ ಮೀನುಗಳು ಸಾವನ್ನಪ್ಪಿರುವ ಸಾಧ್ಯತೆಯಿದೆ. ಈ ಬಗ್ಗೆ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಶಿವರಾಮೇಗೌಡ, ‘ತುಂಗಾ ನದಿಯಿಂದ ಹೊಸಹಳ್ಳಿ ಗ್ರಾಮದ ನಿವಾಸಿಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ, ಆರೋಗ್ಯ ಇಲಾಖೆಯ ಅಧಿಕಾರಿಗಳು, ನೀರನ್ನು ಪರೀಕ್ಷೆ ಮಾಡಿ ಬಳಸುವುದರಿಂದ ಯಾವುದೇ ಸಾಂಕ್ರಾಮಿಕ ರೋಗ ಹರಡುವುದಿಲ್ಲ. ಹಾಗಾಗಿ ಗ್ರಾಮಸ್ಥರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !