ಮಂಗಳವಾರ, ಮಾರ್ಚ್ 2, 2021
18 °C

ಬ್ರಿಟನ್‌ನಿಂದ ಬಂದಿರುವ ಐವರಿಗೆ ಕ್ವಾರಂಟೈನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೋವಿಡ್‌ ಹೆಚ್ಚು ವ್ಯಾಪಕವಾಗಿ ಹರಡಿರುವ ಬ್ರಿಟನ್‌ನಿಂದ ಜಿಲ್ಲೆಗೆ ಬಂದಿರುವ ಐದು ಜನರನ್ನು ನಿಗದಿತ ಮಾನದಂಡಗಳ ಪ್ರಕಾರ ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಈ ಬಗ್ಗೆ ಜನರು ಆತಂಕಕ್ಕೊಳಗಾಗಬಾರದು ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಮನವಿ ಮಾಡಿದ್ದಾರೆ.

ಒಟ್ಟಾರೆ ಏಳು ಜನ ಬ್ರಿಟನ್‌ನಿಂದ ಜಿಲ್ಲೆಗೆ ಬಂದಿದ್ದರು. ಅವರಲ್ಲಿ ಇಬ್ಬರು ಬೀದರ್‌ಗೆ ತೆರಳಿದ್ದಾರೆ. ಉಳಿದ ಐವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜಶೇಖರ ಮಾಲಿ, ‘ಡಿಸೆಂಬರ್ 6, 8, 16 ಹಾಗೂ 18ರಂದು ಐವರು ಜಿಲ್ಲೆಗೆ ಬಂದಿದ್ದಾರೆ. ಅವರಲ್ಲಿ ಒಬ್ಬ ವಿದ್ಯಾರ್ಥಿ ಲಂಡನ್‌ನಲ್ಲಿದ್ದರು. ಉಳಿದವರು ಬ್ರಿಟನ್‌ನ ಬೇರೆಡೆ ಇದ್ದರು. ಅವರನ್ನು ಇದೇ 23ರಂದು ಮತ್ತೊಮ್ಮೆ ಕೋವಿಡ್‌ ಆರ್‌ಟಿ–ಪಿಸಿಆರ್‌ ಪರೀಕ್ಷೆ ಮಾಡಿಸಲಾಗುವುದು ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು