ಸಿದ್ದಾಪುರ: ಹಾಲುಗುಂದ ಗ್ರಾ.ಪಂ ವ್ಯಾಪ್ತಿಯ ಕೊಂಡಂಗೇರಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆ ಬೆನ್ನಲ್ಲೇ, ಗ್ರಾಮದಲ್ಲಿ ಕಟ್ಟೆಚ್ಚರ ವಹಿಸಿದ್ದು, ನಿರ್ಬಂಧ ವಲಯದಲ್ಲಿರುವ 800 ಕುಟುಂಬಗಳಿಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಸಾಮಾಗ್ರಿಗಳನ್ನು ವಿತರಿಸಲಾಯಿತ್ತು.

ಜಿಲ್ಲಾಡಳಿತದ ವತಿಯಿಂದ ಗುರುವಾರದಂದು ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಎಂ.ಎಲ್.ಹರೀಶ್ ಹಾಗೂ ಗ್ರಾಮ ಲೆಕ್ಕಿಗ ಓಮಪ್ಪ ಬಣಾಕರ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು 800ಕ್ಕೂ ಅಧಿಕ ಮನೆಗಳಿಗೆ ಅಕ್ಕಿ ,ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿದರು.

ಹಾಲುಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ಸಿದ್ದಾಪುರ ಠಾಣಾಧಿಕಾರಿ ಬೋಜಪ್ಪ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮುಂದುವರಿಸಲಾಗಿದೆ.

ವಿರಾಜಪೇಟೆ ತಾಲ್ಲೂಕು ಆರೋಗ್ಯ ಇಲಾಖಾಧಿಕಾರಿ ಡಾ.ಯತೀರಾಜ್ ರವರ ನೇತೃತ್ವದಲ್ಲಿ ಆರೋಗ್ಯ ಸಿಬ್ಬಂದಿಗಳು ಕೊಂಡಂಗೇರಿಯ ನಿರ್ಬಂಧಿತ ಪ್ರದೇಶದಲ್ಲಿರುವ ಮನೆಗಳಿಗೆ ತೆರಳಿ ದಿನನಿತ್ಯ ತಪಾಸಣೆ ಮಾಡುತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.