ಭಾನುವಾರ, ಸೆಪ್ಟೆಂಬರ್ 26, 2021
28 °C

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಜನ್ಮದಿನ ಸರಳ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಶಿವಮೊಗ್ಗ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರ 64ನೇ ಜನ್ಮ ದಿನವನ್ನು ಜನವರಿ 15ರಂದು ಸರಳವಾಗಿ ಆಚರಿಸಲಾಗುವುದು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎ.ಡಿ.ಶಿವಪ್ಪ ಹೇಳಿದರು.

ಮಾಯಾವತಿಗೆ ಪ್ರಧಾನಿಯಾಗುವ ಅರ್ಹತೆ ಇದೆ. ನಾಲ್ಕು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಸಂವಿಧಾನದ ಆಶಯದಂತೆ ಎಲ್ಲ ಜಾತಿ, ಧರ್ಮಗಳನ್ನು ಸಮಾನವಾಗಿ ಕಂಡಿದ್ದಾರೆ. ಸರ್ವರಿಗೂ ಸಮಪಾಲು ಎಂಬ ತತ್ವದ ಆಧಾರದಲ್ಲಿ ಕೆಲಸ ಮಾಡಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾಂಗ್ರೆಸ್‌, ಬಿಜೆಪಿ ಯಾವತ್ತು ಜನಪರವಾಗಿಲ್ಲ. ಕಾಂಗ್ರೆಸ್ ಕೇವಲ ಭ್ರಮೆಗಳನ್ನು ಹುಟ್ಟಿಸಿತು. ಪರಿಶಿಷ್ಟರಿಗೆ ಯಾವ ನ್ಯಾಯವೂ ಸಿಗಲಿಲ್ಲ. ಬಿಜೆಪಿ ನ್ಯಾಯವನ್ನೇ ಕಸಿದುಕೊಂಡಿತು. ಮನು ಧರ್ಮ ಸಿದ್ಧಾಂತಕ್ಕೆ ಮರುಳಾಗಿ ಮಾನವ ಧರ್ಮವನ್ನೇ ಮರೆತುಬಿಟ್ಟಿತು. ದೇಶದ ಆರ್ಥಿಕ ಪರಿಸ್ಥಿತಿ ಬುಡಮೇಲು ಮಾಡಿದೆ ಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಎಸ್‌ಪಿ ಮುಖಂಡರಾದ ಜಿ.ಸಂಗಪ್ಪ, ಎಚ್.ಎನ್.ಶ್ರೀನಿವಾಸ್, ಲಕ್ಷ್ಮೀಪತಿ, ಚಂದ್ರಪ್ಪ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು