ಭದ್ರಾ ಅಚ್ಚುಕಟ್ಟು: ಮೇ ಅಂತ್ಯದವರೆಗೆ ನೀರು ಹರಿಸಲು ಆಗ್ರಹ

ಭಾನುವಾರ, ಮೇ 19, 2019
32 °C

ಭದ್ರಾ ಅಚ್ಚುಕಟ್ಟು: ಮೇ ಅಂತ್ಯದವರೆಗೆ ನೀರು ಹರಿಸಲು ಆಗ್ರಹ

Published:
Updated:
Prajavani

ಶಿವಮೊಗ್ಗ: ಭದ್ರಾ ಜಲಾಶಯದ ಬಲ ಹಾಗೂ ಎಡದಂಡೆ ನಾಲೆಗಳಿಗೆ ಮೇ ಅಂತ್ಯದವರೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶನಿವಾರ ಮಲವಗೊಪ್ಪದಲ್ಲಿನ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹಿಂದೆ ನೀರಿನ ಕೊರತೆಯ ಕಾರಣ ಸತತ ಮೂರು ಬೆಳೆ ತ್ಯಾಗ ಮಾಡಿದ್ದರು. ಆರ್ಥಿಕ ನಷ್ಟ ಅನುಭವಿಸಿದ್ದರು. ಈ ಮುಂಗಾರಿನಲ್ಲಿ ಉತ್ತಮ ಮಳೆಯಾಗಿ, ಜಲಾಶಯ ತುಂಬಿದ್ದ ಕಾರಣ ಬೇಸಿಗೆ ಹಂಗಾಮಿನ ಭತ್ತದ ಬೆಳೆಗೆ ನೀರು ಹರಿಸಲಾಗಿದೆ. ಸಾವಿರಾರು ಹೆಕ್ಟೇರ್‌ನಲ್ಲಿ ರೈತರು ಭತ್ತ ನಾಟಿ ಮಾಡಿದ್ದಾರೆ. ಈಗಾಗಲೇ ಹಲವು ಭಾಗಗಳಲ್ಲಿ ಭತ್ತ ತೆನೆಯೊಡೆದು ಹೂ ಕಟ್ಟುತ್ತಿವೆ. ಇಂತಹ ಸಮಯದಲ್ಲಿ ನೀರಿನ ಅಗತ್ಯವಿದೆ. ಅದಕ್ಕಾಗಿ ಮೇ ಅಂತ್ಯದವರೆಗೂ ನೀರು ಹರಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಹಿಂದೆ ನಿರ್ಧರಿಸಿದಂತೆ ಮೇ 15ರವರೆಗೆ ನಾಲೆಗಳಿಗೆ ಹರಿಸುತ್ತಿರುವ ನೀರು ನಿಲ್ಲಿಸುವುದಾಗಿ ಪ್ರಕಟಿಸಿದೆ. ಹಲವು ಭಾಗಗಳಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿಲ್ಲ. ಕನಿಷ್ಠ ಇನ್ನೂ 20 ದಿನಗಳು ನೀರು ಬೇಕಿದೆ. ಇಲ್ಲದಿದ್ದರೆ ಬೆಳೆ ಸಂಪೂರ್ಣ ನಾಶವಾಗುತ್ತದೆ. ಬೆಳೆ ನಂಬಿಕೊಂಡ ರೈತರಿಗೂ ಕಷ್ಟವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಅಚ್ಚುಕಟ್ಟು ವ್ಯಾಪ್ತಿಯ ರೈತರು ಸಾಲ ಮಾಡಿ, ಪ್ರತಿ ಎಕರೆಗೆ ₹ 25 ಸಾವಿರಕ್ಕೂ ಹೆಚ್ಚು ಬಂಡವಾಳ ಹಾಕಿದ್ದಾರೆ. ನೀರಿನ ಕೊರತೆಯಾದರೆ ಆರ್ಥಿಕ ನಷ್ಟದ ಜತೆಗೆ, ಜಾನುವಾರುಗಳಿಗೆ ಮೇವಿನ ಕೊರತೆಯಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ರೈತ ಸಂಘದ ಮುಖಂಡರಾದ ಕೆ.ಟಿ.ಗಂಗಾಧರ್, ಯಶವಂತರಾವ್ ಘೋರ್ಪಡೆ, ಡಿ.ವಿ.ವೀರೇಶ್, ರಂಗೋಜಿರಾವ್, ಪಾಂಡುರಂಗಪ್ಪ, ರಾಮಚಂದ್ರರಾವ್, ಕೆ.ಸಿ. ಗಂಗಾಧರ್, ಹಿರಿಯಣ್ಣಯ್ಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !