ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ಎರಡನೇ ಹಂತದ ಚುನಾವಣೆ ಶೇ 80.32ರಷ್ಟು ಮತದಾನ

Last Updated 27 ಡಿಸೆಂಬರ್ 2020, 16:18 IST
ಅಕ್ಷರ ಗಾತ್ರ

ಗದಗ: ರೋಣ ತಾಲ್ಲೂಕಿನ ಮೆಣಸಿಗಿ ಗ್ರಾಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಶಿವಕುಮಾರ ನೀಲಗುಂದ ಅವರ ಮೇಲೆ ನಡೆದ ಹಲ್ಲೆ ಘಟನೆ ಹೊರತುಪಡಿಸಿ ಮುಂಡರಗಿ, ನರಗುಂದ ಹಾಗೂ ಗಜೇಂದ್ರಗಡ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ 850 ಸ್ಥಾನಗಳಿಗೆ ಭಾನುವಾರ ನಡೆದ ಮತದಾನ ಶಾಂತಿಯುತವಾಗಿತ್ತು.

ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಹಾಗೂ ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ. ಅವರು ರೋಣ ತಾಲ್ಲೂಕಿನ ಗುಜಮಾಗಡಿ, ಡ.ಸ.ಹಡಗಲಿ, ಸವಡಿ, ನರಗುಂದ ತಾಲ್ಲೂಕಿನ ಹದ್ಲಿ, ಕಲಕೇರಿ ಗ್ರಾಮಗಳ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ವೀಕ್ಷಿಸಿದರು.

ಎಲ್ಲ ಮತಗಟ್ಟೆಗಳಲ್ಲಿ ಮತದಾರರನ್ನು ಥರ್ಮಲ್‌ ಸ್ಕ್ರೀನಿಂಗ್‌ ಮಾಡಿ ಮತಗಟ್ಟೆಗೆ ಕಳುಹಿಸುತ್ತಿದ್ದ ದೃಶ್ಯ ಕಂಡುಬಂತು. ಜತೆಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 4ರಿಂದ 5ರ ಅವಧಿಯನ್ನು ಕೋವಿಡ್-19 ಶಂಕಿತರಿಗೆ ಮತಹಕ್ಕು ಚಲಾಯಿಸಲು ಅವಕಾಶ ನೀಡಲಾಗಿತ್ತು.

ಎರಡನೇ ಹಂತದ ಗ್ರಾಮ ಪಂಚಾಯ್ತಿ ಚುನಾವಣೆಯ ಸಮಯವಾರು ಮತದಾನದ ವಿವರ:

ಬೆಳಿಗ್ಗೆ 9ರವರೆಗೆ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನಲ್ಲಿ ಶೇ 8.22, ನರಗುಂದ ಶೇ 8.29, ರೋಣ ಶೇ. 6.62 ಹಾಗೂ ಗಜೇಂದ್ರಗಡ ತಾಲ್ಲೂಕಿನಲ್ಲಿ ಶೇ 7.74 ಸೇರಿದಂತೆ ಒಟ್ಟು ಶೇ 7.69ರಷ್ಟು ಮತದಾನ ಆಗಿತ್ತು.

ಬೆಳಿಗ್ಗೆ 11ರವರೆಗೆ ಮುಂಡರಗಿ ತಾಲ್ಲೂಕಿನಲ್ಲಿ ಶೇ 24.23, ನರಗುಂದ ಶೇ 24.59, ರೋಣ ಶೇ 20.16 ಹಾಗೂ ಗಜೇಂದ್ರಗಡ ತಾಲ್ಲೂಕಿನಲ್ಲಿ ಶೇ 25.46 ಸೇರಿದಂತೆ ಒಟ್ಟು ಶೇ 23.53ರಷ್ಟು ಮತದಾನವಾಗಿತ್ತು.

ಮಧ್ಯಾಹ್ನ 1ರವರೆಗೆ ಮುಂಡರಗಿ ತಾಲ್ಲೂಕಿನಲ್ಲಿ ಶೇ 44.50, ನರಗುಂದ ಶೇ 46.96, ರೋಣ ಶೇ 42.02 ಹಾಗೂ ಗಜೇಂದ್ರಗಡ ತಾಲ್ಲೂಕಿನಲ್ಲಿ ಶೇ 44.91 ಸೇರಿದಂತೆ ಒಟ್ಟು ಶೇ 44.51ರಷ್ಟು ಮತದಾನ ಆಗಿತ್ತು.

ಮಧ್ಯಾಹ್ನ 3ರವರೆಗೆ ಮುಂಡರಗಿ ತಾಲ್ಲೂಕಿನಲ್ಲಿ ಶೇ 64.88, ನರಗುಂದ ಶೇ 66.45, ರೋಣ ಶೇ 60.71 ಹಾಗೂ ಗಜೇಂದ್ರಗಡ ತಾಲ್ಲೂಕಿನಲ್ಲಿ ಶೇ 62.29 ಸೇರಿದಂತೆ ಒಟ್ಟು ಶೇ 63.48ರಷ್ಟು ಮತದಾನ ಆಗಿತ್ತು.

ಸಂಜೆ 5ರವರೆಗೆ ಅಂತಿಮವಾಗಿ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನಲ್ಲಿ ಶೇ 82.13, ನರಗುಂದ ಶೇ 83.64, ರೋಣ ಶೇ 77.41 ಹಾಗೂ ಗಜೇಂದ್ರಗಡ ತಾಲ್ಲೂಕಿನಲ್ಲಿ ಶೇ 78.51 ಸೇರಿದಂತೆ ಒಟ್ಟು ಶೇ 80.32ರಷ್ಟು ಮತದಾನ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT