ಮಂಗಳವಾರ, ಮಾರ್ಚ್ 28, 2023
23 °C

ಮುಂಡರಗಿ: ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ, ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಡರಗಿ: ಇಲ್ಲಿನ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಬೆಳಗಾವಿ ಉತ್ತರ ವಲಯ ಎಸಿಬಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದರು.

‘ಮುಂಡರಗಿಯ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಭೂ ದಾಖಲೆ ಸೇರಿದಂತೆ ವಿವಿಧ ದಾಖಲೆಗಳ ನೋಂದಣಿಗೆ ಸಾರ್ವಜನಿಕರಿಂದ ಹೆಚ್ಚುವರಿ ಹಣ ಪಡೆಯುತ್ತಾರೆ’ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಸಿಬಿ ಅಧಿಕಾರಿಗಳು ಮುಂಡರಗಿ ಉಪ ನೋಂದಣಾಧಿಕಾರಿ, ಸಿಬ್ಬಂದಿ ಹಾಗೂ ಬಾಂಡ್ ರೈಟರ್‌ ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಳಗಾವಿ ಎಸಿಬಿ ಎಸ್‌ಪಿ ನ್ಯಾಮಗೌಡರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್‌ಸ್ಪೆಕ್ಟರ್‌ಗಳಾದ ಎ.ಎಸ್. ಗೂದಿಗೊಪ್ಪ, ಅಲಿ ಶೇಖ್ ಸೇರಿದಂತೆ ಹಲವು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಗುರುವಾರ ರಾತ್ರಿವರೆಗೆ ಕಡತ ಪರಿಶೀಲನೆ ನಡೆದಿದ್ದು, ಹೆಚ್ಚಿನ ಮಾಹಿತಿ ಬಹಿರಂಗಗೊಂಡಿರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.