ಗದಗ: ‘ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೊಬೈಲ್ನ ಅತಿಯಾದ ಬಳಕೆಯಿಂದ ಮೊಬೈಲ್ ವ್ಯಸನಿಗಳಾಗುತ್ತಿದ್ದಾರೆ. ಒಬ್ಬ ವ್ಯಕ್ತಿ ಜೀವನದಲ್ಲಿ ನಿಶ್ಚಿತ ಗುರಿ ಸಾಧಿಸಬೇಕಾದರೆ ಯಾವುದೇ ವ್ಯಸನಗಳಿಗೆ ಬಲಿಯಾಗಬಾರದು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾಡಳಿತ ಭವನದಲ್ಲಿ ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ಶುಕ್ರವಾರ ನಡೆದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದರು.

‘ಕಾಲೇಜು ವಿದ್ಯಾರ್ಥಿಗಳು ಮದ್ಯಪಾನ, ತಂಬಾಕು, ಗುಟ್ಕಾ, ಸಿಗರೇಟನಂತಹ ದುಶ್ಚಟಗಳ ದಾಸರಾಗದೇ ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಬೇಕು’ ಎಂದರು.

ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಅರವಿಂದ ಕರಿನಾಗಣ್ಣವರ ಮಾತನಾಡಿ, ‘ವಿದ್ಯಾರ್ಥಿಗಳು ಕುತೂಹಲದಿಂದ ಮಾದಕ ವ್ಯಸನ ಪ್ರಾರಂಭಿಸಿ ಅದರಿಂದ ಹೊರಬರಲಾರದೇ ದಾಸರಾಗುತ್ತಾರೆ. ಹಾಗಾಗಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡು ಜೀವನದಲ್ಲಿ ಸಫಲರಾಗಬೇಕು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ದುರ್ಗೇಶ ಮಾದಕವಸ್ತು ವಿರೋಧಿ ಪ್ರತಿಜ್ಞಾವಿಧಿ ಬೋಧಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಎಸ್ಪಿ ರೋಹನ್ ಜಗದೀಶ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ಡಿಎಚ್ಒ ಡಾ.ಎಸ್.ಎಸ್.ನೀಲಗುಂದ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಶಿಕ್ಷಣ ಇಲಾಖೆಯ ಜಿಲ್ಲಾ ಉಪಸಮನ್ವಯಾಧಿಕಾರಿ ಎಂ.ಎಚ್.ಕಾಂಬಳಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರೌಢಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಚಟವನ್ನು ವ್ಯಸನ ಎನ್ನುತ್ತೇವೆ. ಇಂದಿನ ಯುವಜನರು ದುಶ್ಚಟಗಳಿಗೆ ಬಲಿಯಾಗದೇ ವ್ಯಸನಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಬೇಕು ಸಿ.ಎನ್.ಶ್ರೀಧರ್ ಗದಗ ಜಿಲ್ಲಾಧಿಕಾರಿ

ಗಮನ ಸೆಳೆದ ಜಾಗೃತಿ ಗೀತೆ ಕಿರುನಾಟಕ ರೋಣ ಪಟ್ಟಣದ ಜೀವನ ಬೆಳಕು ಕಲಾ ತಂಡದ ರಾಜಶೇಖರ ಹಿರೇಮಠ ಹಾಗೂ ತಂಡದವರು ಪ್ರಸ್ತುತಪಡಿಸಿದ ದೀಪ ನೃತ್ಯ ಹಾಗೂ ಮಾದಕವಸ್ತು ವಿರೋಧಿ ಜಾಗೃತಿ ಗೀತೆಗಳು ಗಮನ ಸೆಳೆದವು. ಬೆಟಗೇರಿಯ ಎಸ್ಎಸ್ಕೆ ಜಗದಂಬಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವ್ಯಸನಮುಕ್ತ ದಿನಾಚರಣೆಯ ಅಂಗವಾಗಿ ಕಿರುನಾಟಕ ಪ್ರಸುತಪಡಿಸಿ ಮಾದಕವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.