ಗದಗ: ಅಖಿಲ ಭಾರತ ಪಂಚಾಯತ್ ಪರಿಷತ್ನ 18ನೇ ರಾಷ್ಟ್ರೀಯ ಸಮ್ಮೇಳನ ಡಿ.13 ಮತ್ತು 14ರಂದು ಇಲ್ಲಿನ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.

‘ಅಖಿಲ ಭಾರತ ಪಂಚಾಯತ್ ಪರಿಷತ್ ಅಧ್ಯಕ್ಷ ಸುಭೋದ್ ಕಾಂತ್ ಸಹಾಯ್, ಕಾರ್ಯಾಧ್ಯಕ್ಷ ಡಾ. ಅಶೋಕ್ ಚೌಹಾಣ್, ಕಾನೂನು ಸಚಿವ ಎಚ್.ಕೆ.ಪಾಟೀಲ, ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಸೇರಿ ಪ್ರಮುಖರು ಸಮ್ಮೇಳನದಲ್ಲಿ ಭಾಗವಹಿಸುವರು ಎಂದು ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಗ್ರಾಮ ಸ್ವರಾಜ್ಯಕ್ಕೆ ಗಾಂಧೀಜಿ ತತ್ವಗಳು, ಪಂಚಾಯತ್ ಕಾಯ್ದೆಗಳು, ವಿಕೇಂದ್ರೀಕೃತ ಆಡಳಿತ, ನೀತಿ-ನಿಯಮಗಳು ಮತ್ತು ಸಮುದಾಯ ಸಬಲೀಕರಣ ಕುರಿತು ಅಧಿವೇಶನ ನಡೆಯಲಿವೆ. ದೇಶದ ವಿವಿಧೆಡೆಯಿಂದ ಕ್ಷೇತ್ರ ತಜ್ಞರು, ಅಧಿಕಾರಿಗಳು, ಸಾಮಾಜಿಕ ಹೋರಾಟಗಾರರು ಮತ್ತು ಪಂಚಾಯತ್ ಚಳವಳಿಯ ನಾಯಕರು ಭಾಗವಹಿಸುವರು’ ಎಂದು ಅವರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.