ರೋಣ: ‘ಮನುಷ್ಯನಿಗೆ ಶಿಕ್ಷಣ ಅತೀ ಮುಖ್ಯ. ಪ್ರತಿಯೊಬ್ಬರಲ್ಲಿಯೂ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಯು ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಹೇಳಿದರು.

ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಆರ್.ಪಾಟೀಲ ಪ್ರತಿಷ್ಠಾನ ಇವರ ವತಿಯಿಂದ ಸೋಮವಾರ ಆಯೋಜಿಸಿದ್ದ ‘ಎಸ್ಎಸ್ಎಲ್ಸಿ ಹಾಗೂ ಪಿಯುಸಿ ನಂತರ ಮುಂದೇನು’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

‘ಶಿಕ್ಷಣ ಎಂಬುದು ಸಾಗರದ್ದಂತೆ ಎಷ್ಟು ಪಡೆದುಕೊಂಡರು ಸಾಲದು. ನಮ್ಮಲ್ಲಿರುವ ಪ್ರತಿಭೆಯನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ. ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳುವಲ್ಲಿ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಜೀವನದಲ್ಲಿ ಸಾಧನೆ ಮೂಲವೇ ಶಿಕ್ಷಣವಾಗಿದೆ’ ಎಂದರು.

ಶಾಸಕ ಜಿ.ಎಸ್.ಪಾಟೀಲ ಮಾತನಾಡಿ, ‘ಪ್ರತಿಯೊಬ್ಬ ವಿದ್ಯಾರ್ಥಿಗೂ ಜೀವನದಲ್ಲಿ ಗುರು ಹಾಗೂ ಗುರಿ ಮುಖ್ಯ. ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಗುರುವಿನ ಮಾರ್ಗದರ್ಶನ ಹಾಗೂ ಸ್ಪಷ್ಟವಾದ ಗುರಿ ಇದ್ದಾಗ ಮಾತ್ರ ಪ್ರತಿಯೊಬ್ಬರು ಸಾಧನೆ ಶಿಖರವೇರಲು ಸಾಧ್ಯ’ ಎಂದು ಹೇಳಿದರು.

ಐ.ಎಸ್.ಪಾಟೀಲ, ಜಿ.ಎಸ್.ಟಿ ಸಹಾಯಕ ಆಯುಕ್ತರಾದ ಅಶೋಕ ಮಿರ್ಜಿ, ಸಾಧನಾ ಅಕಾಡೆಮಿಯ ಬಿ.ಮಂಜುನಾಥ, ನರೇಗಲ್ಲ ಅನ್ನದಾನೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯ ವಾಯ್.ಸಿ. ಪಾಟೀಲ, ರಾಜೀವ್ ಗಾಂಧಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಬಿ. ಕೊಟ್ಟೂರಶೆಟ್ಟರ, ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಬಿ.ಎಫ್. ಚೇಗರಡ್ಡಿಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.