ಗದಗ: ‘ಅಂಬಿಗರ ಚೌಡಯ್ಯನವರು 12ನೇ ಶತಮಾನದ ಶಿವಶರಣರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಠ ವ್ಯಕ್ತಿತ್ವ ಇವರದ್ದಾಗಿತ್ತು. ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಂಬಿಗರ ಚೌಡಯ್ಯನವರು ಬಸವಣ್ಣನವರಿಂದ ಲಿಂಗದ ದೀಕ್ಷೆ ಪಡೆದರು. ಕಾಯಕ ಅಥವಾ ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಇವರ ವಚನಗಳ ಅಂಕಿತವಾಗಿದೆ. ಅಂಬಿಗರ ಚೌಡಯ್ಯನವರು ನೇರವಾದ ನುಡಿ, ದಿಟ್ಟವಾದ ನಡೆಗೆ ಹೆಸರಾಗಿದ್ದರು. ನಿಷ್ಠುರವಾದಿಗಳಾಗಿದ್ದು ಸಮಾಜದಲ್ಲಿನ ಮೂಢನಂಬಿಕೆ, ಕಂದಾಚಾರ ಹೊಡೆದೋಡಿಸಿ ಸಮಾಜ ಸುಧಾರಣೆಗೆ ಶ್ರಮಿಸಿದರು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ‘ಅಂಬಿಗರ ಚೌಡಯ್ಯನವರು ನೇರ ನಿಷ್ಠುರವಾದಿಗಳಾಗಿದ್ದರು. ದೋಣಿ ನಡೆಸುವ ಕಾಯಕ ಇವರದಾಗಿತ್ತು. ಕಾಯಕ ನಿಷ್ಠೆಗೆ ಹೆಸರಾದ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ತಾರತಮ್ಯ ಹೋಗಲಾಡಿಸಿ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದರು ಎಂದರು.

ಈ ವೇಳೆ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ನರೇಗಲ್ನ ಉಪನ್ಯಾಸಕ ಶಿವಾನಂದ ಗೋಗೇರಿ ಅಂಬಿಗರ ಚೌಡಯ್ಯನವರ ಕುರಿತು ಉಪನ್ಯಾಸ ನೀಡಿದರು.

ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಡಿವೈಎಸ್ಪಿ ವಿದ್ಯಾಧರ ನಾಯಕ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ನಂದಾ ಹಣಬರಟ್ಟಿ, ಅಂಬಿಗರ ಚೌಡಯ್ಯ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಬಿ.ಗಾರವಾಡ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಪುಷ್ಪಾ ಪೂಜಾರ, ಉಪಾಧ್ಯಕ್ಷ ಸಿ.ಪಿ.ಬಾರಕೇರ, ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಗಣೇಶ ಸುಲ್ತಾನಪುರ, ಪ್ರಮುಖರಾದ ಯಶೋದಾ ಜಾಲಗಾರ, ಶಕುಂತಲಾ ಜಕನೂರ, ಪ್ರೇಮಾ ಮನಗೂಳಿ, ಕೀರ್ತಿ ಜಕನೂರ ಸೇರಿದಂತೆ ಹಲವರು ಇದ್ದರು.

ಸ್ವಾಭಿಮಾನದಿಂದ ಹಾಗೂ ಆತ್ಮ ವಿಶ್ವಾಸದಿಂದ ಬದುಕಬೇಕು. ಅಂಬಿಗರ ಚೌಡಯ್ಯನವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು
ಎಸ್.ವಿ.ಸಂಕನೂರ ವಿಧಾನ ಪರಿಷತ್ ಸದಸ್ಯ

ಸಮಾಜ ಸುಧಾರಣೆಯಾಗಬೇಕಾದರೆ ಶಿಕ್ಷಣವೊಂದೇ ಮಾರ್ಗವಾಗಿದೆ. ಆದಕಾರಣ ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು
ಡಾ. ದುರಗೇಶ್ ಕೆ.ಆರ್. ಹೆಚ್ಚುವರಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.