ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಟ್ಟಡ ಕಾಮಗಾರಿಗಳ ಶಿಲಾನ್ಯಾಸ, ಅಂಬುಲೆನ್ಸ್‌ ಲೋಕಾರ್ಪಣೆ

Published : 14 ಸೆಪ್ಟೆಂಬರ್ 2024, 16:21 IST
Last Updated : 14 ಸೆಪ್ಟೆಂಬರ್ 2024, 16:21 IST
ಫಾಲೋ ಮಾಡಿ
Comments

 ಗದಗ: ಇಲ್ಲಿನ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್‌) 50 ಹಾಸಿಗೆಗಳ ತೀವ್ರ ನಿಗಾ ಘಟಕ ಮತ್ತು ಜಿಲ್ಲಾ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಕಟ್ಟಡ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ಹಾಗೂ ಅಂಬುಲೆನ್ಸ್‌ ಲೋಕಾರ್ಪಣೆ ಮತ್ತು ನೂತನ ಡಯಾಲಿಸಿಸ್ ಘಟಕ ಉದ್ಘಾಟನೆ ಸಮಾರಂಭ ಭಾನುವಾರ ಬೆಳಿಗ್ಗೆ 10ಕ್ಕೆ ಗದಗ ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಶರಣಪ್ರಕಾಶ ಪಾಟೀಲ  ಉಪಸ್ಥಿತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು.

ಜಿಮ್ಸ್‌ ನಿರ್ದೇಶಕ ಡಾ. ಬಸವರಾಜ ಪಿ. ಬೊಮ್ಮನಹಳ್ಳಿ, ಧಾರವಾಡದ ಆಕುಕ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಎಸ್.ಎನ್.ಸುರೇಶ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪ್ರಾಂಶುಪಾಲ ಡಾ. ರಾಜು ಜಿ.ಎಂ., ಅಧೀಕ್ಷಕಿ ಡಾ. ರೇಖಾ ಎಸ್. ಸೋನಾವನೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಿ.ಸಿ.ಕರೀಗೌಡರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT