ಗದಗ: ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ 47 ದಿನಗಳಿಂದ ನಡೆದಿದ್ದ ಉತ್ಖನನ ಕಾರ್ಯ ಬುಧವಾರ ಮುಕ್ತಾಯಗೊಂಡಿತು.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಮೈಸೂರು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಉತ್ಖನನ ಕಾರ್ಯ ನಡೆದಿತ್ತು.

ಬುಧವಾರ ಸಂಜೆ ಪುರಾತತ್ವ ಇಲಾಖೆಯ ನಿಯಮದಂತೆ 14 ಅಡಿ ಆಳ ತೆಗೆದ ಉತ್ಖನನ ಸ್ಥಳವನ್ನು ಪ್ಲಾಸ್ಟಿಕ್ ತಾಡಪತ್ರಿ ಹಾಕಿ, ಉತ್ಖನನದ ವೇಳೆ ತೆಗೆದ ಮಣ್ಣನ್ನೇ ಹಾಕಿ ಮುಚ್ಚುವ ಕಾರ್ಯ ಕೈಗೊಳ್ಳಲಾಯಿತು.

‘10X10 ಮೀಟರ್ ಜಾಗದಲ್ಲಿ 4 ಬಾಕ್ಸ್ಗಳನ್ನು ರಚಿಸಿ, 30 ರಿಂದ 35 ಕಾರ್ಮಿಕರು 47 ದಿನ ಉತ್ಖನನ ಕಾರ್ಯದಲ್ಲಿ ಪಾಲ್ಗೊಂಡಿದ್ದರು. 50ಕ್ಕೂ ಹೆಚ್ಚು ಪ್ರಾಚ್ಯ ಅವಶೇಷಗಳು ಸಿಕ್ಕವು. ಇತಿಹಾಸ ತಜ್ಞರ ಸ್ಥಳ ಪರಿಶೀಲನೆ ಬಳಿಕ ಉತ್ಖನನಕ್ಕೆ ಪೂರ್ಣ ವಿರಾಮ ಹಾಕಲಾಗಿದೆ’ ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ತಿಳಿಸಿದರು.

‘ಮಾರ್ಚ್ 30ರಂದು ನಡೆಯುವ ವೀರಭದ್ರೇಶ್ವರ ಜಾತ್ರೆಯ ಧಾರ್ಮಿಕ ಕಾರ್ಯಗಳಿಗೆ ಅನುಕೂಲ ಮಾಡಿಕೊಡಲು ಉತ್ಖನನ ಮಾಡಿದ ಸ್ಥಳ ಮುಚ್ಚಲಾಗುತ್ತಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅನುಮತಿಯೊಂದಿಗೆ ಗ್ರಾಮದ ಇತರೆ ಸ್ಥಳದಲ್ಲಿ ಉತ್ಖನನ ಮಾಡುವ ಉದ್ದೇಶವಿದೆ’ ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸದಸ್ಯ ಸಿದ್ದು ಪಾಟೀಲ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.