ಗದಗ: ‘ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆ–2024 (ಕೆಪಿಐಡಿ ಅಧಿನಿಯಮ) ಮತ್ತು 2019ರ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆಗೆ (ಬಡ್ಸ್ ಆ್ಯಕ್ಟ್) ಇನ್ನಷ್ಟು ಬಲ ತುಂಬುವ ಅಗತ್ಯವಿದೆ’ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

‘ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಕರಡು ಪ್ರತಿ ಸಿದ್ಧಪಡಿಸಲಾಗಿದೆ. ಅದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ಸಿಗಲಿದೆಯೇ ಎಂಬುದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ನೋಡಲು ಕೊಡಲಾಗಿದೆ. ಮುಂದಿನ ಮೂರು–ನಾಲ್ಕು ದಿನಗಳಲ್ಲಿ ಕಾನೂನಿನ ಸ್ವರೂಪ ಬರಲಿದ್ದು, ಜನವರಿ 30ರಂದು ಕರಡು ಪ್ರತಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲು ಪ್ರಯತ್ನಿಸಲಾಗುವುದು. ಅಷ್ಟರಲ್ಲಿ ಗೃಹ ಸಚಿವ, ಕಂದಾಯ ಸಚಿವ ಹಾಗೂ ಉಪ ಮುಖ್ಯಮಂತ್ರಿ ಜತೆಗೆ ಸಮಾಲೋಚಿಸಲಾಗುವುದು. ನಂತರ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುವುದು’ ಎಂದು ಅವರು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.