ಶಿರಹಟ್ಟಿ: ಗ್ರಾಮದಲ್ಲಿ ಕಿರಾಣಿ ಅಂಗಡಿಗಳಿಂತ ಹೆಚ್ಚಾಗಿರುವ ಅಕ್ರಮ ಮದ್ಯ ಮಾರಾಟ ಅಂಗಡಿಗಳು, ಸೇತುವೆ ಇಲ್ಲದೆ ಪರದಾಡುತ್ತಿರುವ ವಿದ್ಯಾರ್ಥಿಗಳು, ಬಯಲು ಶೌಚದಿಂದ ಗಬ್ಬು ನಾರುತ್ತಿರುವ ಹೊರವಲಯ, ಹದಗೆಟ್ಟ ರಸ್ತೆಯಲ್ಲಿ ನಿತ್ಯ ಸಂಚಾರ ಸೇರಿದಂತೆ ಹಲವು ಇಲ್ಲಗಳ ಮಧ್ಯೆಯೇ ಜೀವನ ನಡೆಸಬೇಕಿದೆ ಎಂದು ಬನ್ನಿಕೊಪ್ಪ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯವಾಗಿ ಪಂಚಾಯ್ತಿ ಹೊಂದಿರುವ ಬನ್ನಿಕೊಪ್ಪ ಗ್ರಾಮದಲ್ಲಿ 11 ಮಂದಿ ಗ್ರಾಮ ಪಂಚಾಯಿತಿ ಸದಸ್ಯರಿದ್ದು, ಗ್ರಾಮದಲ್ಲಿಯೇ ಅಧ್ಯಕ್ಷರಿದ್ದಾರೆ. ಸುಮಾರು ಐದು ಸಾವಿರ ಜನಸಂಖ್ಯೆ ಇರುವ ಗ್ರಾಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತೋರುತ್ತಿರುವ ನಿಷ್ಕಾಳಜಿಯಿಂದ ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಅಕ್ರಮ ಮದ್ಯ ಮಾರಾಟ: ‘ಸುತ್ತಮುತ್ತಲಿನ ಗ್ರಾಮದಲ್ಲಿ ಮದ್ಯ ಮಾರಾಟ ಸ್ಥಗಿತವಾಗಿರುವುದರಿಂದ ಬನ್ನಿಕೊಪ್ಪದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ. ಇಲ್ಲಿ ಕಿರಾಣಿ ಅಂಗಡಿಗಳಿಂತ ಅಕ್ರಮವಾಗಿ ಮದ್ಯ ಮಾರುವ ಅಂಗಡಿಗಳೇ ಹೆಚ್ಚಾಗಿವೆ. ಇದರಿಂದಾಗಿ ಸಂಜೆ ಆಗುತ್ತಿದ್ದಂತೆ ಕುಡುಕರ ಹಾವಳಿ ಅತಿಯಾಗುತ್ತಿದೆ. ಮಹಿಳೆಯರು ಸಂಜೆವೇಳೆ ರಸ್ತೆಯಲ್ಲಿ ಸಂಚರಿಸುವುದೇ ದುಸ್ತರವಾಗಿದೆ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆಯೇ ಸಾಥ್ ನೀಡುತ್ತಿದೆ’ ಎಂದು ಗ್ರಾಮದ ಮಹಿಳೆಯರು ಆರೋಪ ಮಾಡಿದ್ದಾರೆ.

ಈಡೇರದ ಬಹುದಿನಗಳ ಬೇಡಿಕೆ:

ಬನ್ನಿಕೊಪ್ಪ ಗ್ರಾಮದ ಬಹುದಿನದ ಬೇಡಿಕೆ ಎಂದರೆ ಸೇತುವೆ ನಿರ್ಮಾಣ. ಗ್ರಾಮದ ಶಾಲೆ, ಕಾಲೇಜು, ನೂತನ ಪ್ಲಾಟು ಅಷ್ಟೇ ಅಲ್ಲದೇ ಪಂಚಾಯಿತಿಗೆ ಹೋಗಬೇಕೆಂದರೆ ಈ ಸೇತುವೆ ಮೂಲಕವೇ ಹಾದು ಹೋಗಬೇಕು. ಗ್ರಾಮದ ಹಳ್ಳದ ನೀರು ಸೇತುವೆ ಮೇಲೆಯೇ ಹರಿಯುವುದರಿಂದ ಸದ್ಯ ಸೇತುವೆ ಸಂಪೂರ್ಣ ಹಾಳಾಗಿದೆ. ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಗ್ರಾಮದ ಹೊರವಲಯದ ರಸ್ತೆಯಿಂದ 3.5 ಕಿ.ಮೀ. ನಡೆದು ಶಾಲೆ ಹಾಗೂ ಪಂಚಾಯಿತಿ ಸೇರಬೇಕಾದ ಅನಿವಾರ್ಯತೆ ಇದೆ. ಈ ಕುರಿತು ಹಲವಾರು ಮನವಿ ಸಲ್ಲಿಸಿದರೂ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಸ್ಪಂದನೆ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಲವತ್ತುಕೊಂಡಿದ್ದಾರೆ.

ಸಿಗದ ನರೇಗಾ ಕೂಲಿ:

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮದ ಜನರಿಗೆ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನೀಡುತ್ತಿಲ್ಲ. ಇದರಿಂದಾಗಿ ಗ್ರಾಮದ ಜನರು ಕೆಲಸ ಅರಸಿ ದೂರದ ಬೆಂಗಳೂರು, ಮಂಗಳೂರು, ಗೋವಾಗಳಂತಹ ನಗರಗಳಿಗೆ ವಲನೆ ಹೋಗುತ್ತಿದ್ದಾರೆ. ನರೇಗಾ ಕೂಲಿ ಕೆಲಸ ಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದರೂ ಕೆಲಸ ನೀಡದೆ ಇರುವುದು ಅಧಿಕಾರಿಗಳ ನಿಷ್ಕಾಳಜಿ ತೋರಿಸುತ್ತದೆ ಎಂದು ಕೂಲಿಕಾರರು ಆಕ್ರೋಶ ಹೊರಹಾಕಿದ್ದಾರೆ.

ಉಪ ಆರೋಗ್ಯ ಕೇಂದ್ರಕ್ಕೆ ಬೇಡಿಕೆ: ಗ್ರಾಮದಲ್ಲಿ ಪ್ರಾಥಮಿಕ ಉಪ ಆರೋಗ್ಯ ಕೇಂದ್ರ ಸ್ಥಾಪಿಸಲು ಹಲವಾರು ಬಾರಿ ಮನವಿ ಸಲ್ಲಿಸಲಾಗಿದ್ದು, ಯಾವುದೇ ಮನ್ನಣೆ ದೊರಕುತ್ತಿಲ್ಲ. ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾದಾಗ ದೂರದ ಬೆಳ್ಳಟ್ಟಿಗೆ ಹೋಗಬೇಕು. ಅಲ್ಲಿ ಸರಿಯಾದ ಸ್ಪಂದನೆ ಸಿಗದಿದ್ದಾಗ ಶಿರಹಟ್ಟಿಗೆ ಹೋಗುವ ಅನಿವಾರ್ಯ ತಲೆದೋರುತ್ತದೆ. ಹೀಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಜೀವಹಾನಿ ಸಂಭವಿಸಿರುವ ಉದಾಹರಣೆಗಳೂ ಇವೆ.

ಜೂಜಾಟದ ಕೇಂದ್ರ:

ಬನ್ನಿಕೊಪ್ಪ ಗ್ರಾಮವು ಮದ್ಯ ಹಾಗೂ ಜೂಜಾಟದ ತವರೂರಾಗಿದೆ. ಗ್ರಾಮದ ಸುತ್ತಲೂ ಎಲ್ಲೆಂದರಲ್ಲಿ ಇಸ್ಪೀಟು ಆಟ ಆಡುತ್ತಿದ್ದು, ಇದರಿಂದಾಗಿ ಗ್ರಾಮದ ಕೆಲ ಯುವಕರು ಆರ್ಥಿಕ ದಿವಾಳಿತನ ಎದುರಿಸುತ್ತಿದ್ದಾರೆ. ಐಪಿಎಲ್ ಬೆಟ್ಟಿಂಗ್ ಹಾಗೂ ಇಸ್ಪೀಟು ಆಟಕ್ಕೆ ಕಡಿವಾಣ ಹಾಕದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಬೇಜವಬ್ದಾರಿತನಕ್ಕೆ ಗ್ರಾಮದ ಹಿರಿಯರು ಹಾಗೂ ಮಹಿಳೆಯರು ಹಿಡಿಶಾಪ ಹಾಕುತ್ತಿದ್ದಾರೆ.

ಬಾರದ ಬಸ್ಗಳು; ವಿದ್ಯಾರ್ಥಿಗಳಿಗೆ ತೊಂದರೆ

ಗ್ರಾಮದಿಂದ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ. ಬಸ್ ಬಿಡುವಂತೆ ಸಾಕಷ್ಟು ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಬಸ್ ಇಲ್ಲದೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸಮಸ್ಯೆ ಅನುಭವಿಸುತ್ತಿದ್ದು, ಸಮರ್ಪಕವಾಗಿ ಬಸ್ ಸೌಲಭ್ಯ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇದರ ಜತೆಗೆ ಗ್ರಾಮದಲ್ಲಿನ ಬಹುತೇಕ ರಸ್ತೆಗಳು ಹಾಗೂ ಸುತ್ತಮುತ್ತಲಿನ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಗ್ರಾಮದಲ್ಲಿ ಅವೈಜ್ಞಾನಿಕವಾಗಿ ಚರಂಡಿಗಳನ್ನು ನಿರ್ಮಾಣ ಮಾಡಲಾಗಿದ್ದು, ಮಳೆಯಾದರೆ ಚರಂಡಿ ನೀರು ರಸ್ತೆ ಮೇಲೆಯೇ ಶೇಖರಣೆಗೊಂಡು ಸಾಂಕ್ರಾಮಿಕ ರೋಗಗಳನ್ನು ಅಹ್ವಾನಿಸುತ್ತಿವೆ.

ಗ್ರಾಮಸ್ಥರು ಶೌಚಾಲಯಗಳನ್ನು ಉಪಯೋಗಿಸದೆ ಬಯಲು ಶೌಚವನ್ನು ಆಶ್ರಯಿಸುತ್ತಿದ್ದು, ಗ್ರಾಮಕ್ಕೆ ಪ್ರವೇಶ ಮಾಡುತ್ತಿದ್ದಂತೆಯೇ ಗಬ್ಬು ವಾಸನೆ ಬೀರುತ್ತದೆ.

ಸ್ಥಳೀಯವಾಗಿ ಪಂಚಾಯ್ತಿ ಹೊಂದಿರುವ ಬನ್ನಿಕೊಪ್ಪ ಗ್ರಾಮದಲ್ಲಿ 11 ಮಂದಿ ಗ್ರಾಮ ಪಂಚಾಯಿತಿ ಸದಸ್ಯರಿದ್ದು, ಗ್ರಾಮದಲ್ಲಿಯೇ ಅಧ್ಯಕ್ಷರಿದ್ದಾರೆ. ಸುಮಾರು ಐದು ಸಾವಿರ ಜನಸಂಖ್ಯೆ ಇರುವ ಗ್ರಾಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತೋರುತ್ತಿರುವ ನಿಷ್ಕಾಳಜಿಯಿಂದ ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಉಪ ಆರೋಗ್ಯ ಕೇಂದ್ರಕ್ಕೆ ಬೇಡಿಕೆ:

ಗ್ರಾಮದಲ್ಲಿ ಪ್ರಾಥಮಿಕ ಉಪ ಆರೋಗ್ಯ ಕೇಂದ್ರ ಸ್ಥಾಪಿಸಲು ಹಲವಾರು ಬಾರಿ ಮನವಿ ಸಲ್ಲಿಸಲಾಗಿದ್ದು, ಯಾವುದೇ ಮನ್ನಣೆ ದೊರಕುತ್ತಿಲ್ಲ. ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾದಾಗ ದೂರದ ಬೆಳ್ಳಟ್ಟಿಗೆ ಹೋಗಬೇಕು. ಅಲ್ಲಿ ಸರಿಯಾದ ಸ್ಪಂದನೆ ಸಿಗದಿದ್ದಾಗ ಶಿರಹಟ್ಟಿಗೆ ಹೋಗುವ ಅನಿವಾರ್ಯ ತಲೆದೋರುತ್ತದೆ. ಹೀಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಜೀವಹಾನಿ ಸಂಭವಿಸಿರುವ ಉದಾಹರಣೆಗಳೂ ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.