ಗದಗ: ‘ಜಗತ್ತಿನಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಮೊಟ್ಟಮೊದಲು ಪ್ರತಿಪಾದಿಸಿ, ಅವುಗಳನ್ನು ಅನುಷ್ಠಾನಕ್ಕೆ ತಂದವರು ಬಸವಣ್ಣ. ಅವರು ಸಾಮಾಜಿಕ ನ್ಯಾಯ, ಜಾತಿ-ಮತ-ಪಂಥಗಳ ಭೇದ ಮರೆತು ಸಮಸಮಾಜ ನಿರ್ಮಾಣ ಮಾಡಲು ಶ್ರಮಿಸಿದರು’ ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಸಮಸ್ತ ಬಸವಪರ ಸಂಘಟನೆಗಳ ಆಶ್ರಯದಲ್ಲಿ ಮಂಗಳವಾರ ನಗರದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಸಂಸ್ಕೃತಿ ಅಭಿಯಾನದ ಸಭಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ. ಆ ಶಾಪದಿಂದ ಮುಕ್ತವಾದಾಗ ಮಾತ್ರ ಸುಂದರ ಸಮಾಜ ನಿರ್ಮಾಣವಾಗಲು ಸಾಧ್ಯ. ವ್ಯಸನಮುಕ್ತ, ಜಾತಿ-ಮತ-ಪಂಥ, ಲಿಂಗ ಭೇದಗಳಿಂದ ಮುಕ್ತವಾಗಿರುವ ಸಮಾಜ ನಿರ್ಮಾಣ ಮಾಡುವುದೇ ಬಸವ ಅನುಯಾಯಿಗಳ ಕರ್ತವ್ಯವಾಗಿದೆ’ ಎಂದರು.

‘ರಾಜ್ಯದಾದ್ಯಂತ ವ್ಯಸನಮುಕ್ತ ಸಮಾಜ ನಿರ್ಮಾಣ, ಸಮಸಮಾಜದ ಪರಿಕಲ್ಪನೆ ಪಸರಿಸುವುದು, ಮೌಢ್ಯ ಆಚರಣೆ ಮತ್ತು ಶೋಷಣೆಯಿಂದ ಜನರನ್ನು ಮುಕ್ತಗೊಳಿಸುವುದು, ಕಾಯಕ, ದಾಸೋಹದ ಮಹತ್ವವನ್ನು ಸಾರುವ ಬಸವಾದಿ ಶರಣರ ಕನಸನ್ನು ಸಾಕಾರಾಗೊಳಿಸಲು ಬಸವ ಸಂಸ್ಕೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದರು.

ಸಾಣೇಹಳ್ಳಿ ತರಳಬಾಳು ಶಾಖಾಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಕೂಡಲಸಂಗಮ ಬಸವಧರ್ಮ ಮಹಾಪೀಠದ ಗಂಗಾ ಮಾತಾಜಿ, ಶಿವಾನಂದ ಮಠದ ಅಭಿನವ ಶಿವಾನಂದ ಸ್ವಾಮೀಜಿ, ನಿಜಗುಣ ಪ್ರಭು ಸ್ವಾಮೀಜಿ, ಮಾತನಾಡಿದರು.

ಸಾಹಿತಿ ಪ್ರೊ. ಚಂದ್ರಶೇಖರ ವಸ್ತ್ರದ ಅಧ್ಯಕ್ಷತೆ ವಹಿಸಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಡಿ.ಆರ್.ಪಾಟೀಲ, ಮಾಜಿ ಸಚಿವ ಎಸ್.ಎಸ್.ಪಾಟೀಲ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಶಿವಾನಂದ ಪಟ್ಟಣಶೆಟ್ಟರ, ಕೆ.ಎಸ್.ಚೆಟ್ಟಿ, ಶೇಖಣ್ಣ ಕವಳಿಕಾಯಿ, ಜಿ.ಬಿ.ಪಾಟೀಲ, ಶ್ರೀದೇವಿ ಶೆಟ್ಟರ, ಸುಧಾ ಹುಚ್ಚಣ್ಣವರ, ಗೌರಕ್ಕ ಬಡಿಗಣ್ಣವರ, ಗಿರಿಜಕ್ಕ ಹಸಬಿ, ಅಮರೇಶ ಅಂಗಡಿ ಸೇರಿ ಹಲವರು ಪಾಲ್ಗೊಂಡಿದ್ದರು.

‘ಶಿವಚಿಂತೆ ಶಿವಜ್ಞಾನವಿಲ್ಲದ ಮನುಜರು’ ವಿಷಯದ ಕುರಿತು ಆಳಂದದ ತೋಂಟದಾರ್ಯ ಅನುಭವ ಮಂಟಪದ ಸಂಚಾಲಕ ಕೋರಣೇಶ್ವರ ಸ್ವಾಮೀಜಿ, ‘ಅಸ್ಪೃಶ್ಯತಾ ನಿವಾರಣೆಗೆ ಶರಣರ ಕೊಡುಗೆ’ ವಿಷಯದ ಕುರಿತು ಡಾ. ಸಿದ್ಧನಗೌಡ ಪಾಟೀಲ ಉಪನ್ಯಾಸ ನೀಡಿದರು. ನಂತರ ‘ಜಂಗಮದೆಡೆಗೆ’ ನಾಟಕ ಪ್ರದರ್ಶನಗೊಂಡಿತು.

ಬಸವಣ್ಣನವರ ಆದರ್ಶಗಳು ಮೌಲ್ಯಗಳು ಸಮಾಜಕ್ಕೆ ಅವಶ್ಯವಾಗಿದೆ. ಬಸವಾದಿ ಶಿವಶರಣರ ತತ್ವಾದರ್ಶಗಳನ್ನು ಸಮಾಜದಲ್ಲಿರುವ ಜನರಿಗೆ ತಲುಪಿಸುವ ಕೆಲಸ ಮಾಡಿದರೆ ಜನರಲ್ಲಿ ಅರಿವು ಮೂಡುತ್ತದೆ
ಅಭಿನವ ಬೂದೀಶ್ವರ ಸ್ವಾಮೀಜಿ ಬೂದೀಶ್ವರ ಮಠ

‘ಲಿಂಗಾಯತರು ಎಚ್ಚರಗೊಳ್ಳುವ ಸಮಯ ಬಂದಿದೆ’

‘ರಾಜ್ಯದಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆಯಿಲ್ಲ. ಆದರೆ ಲಿಂಗಾಯತ ಎಂದು ಬರೆಸುವ ಜನರ ಕೊರತೆಯಿಂದಾಗಿ ಲಿಂಗಾಯತರ ಸಂಖ್ಯೆ ಕಡಿಮೆಯಾಗುತ್ತಿದೆ’ ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು. ‘ಲಿಂಗಾಯತರ ಸಂಖ್ಯೆ ಕಡಿಮೆಯಾಗಬಾರದು. ಯಾಕೆಂದರೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರುತ್ತದೆ. ರಾಜಕೀಯ ಪ್ರಾತಿನಿಧ್ಯ ಸಿಗುತ್ತದೆ. ಆದ್ದರಿಂದ ಲಿಂಗಾಯತ ಎಂದು ಬರೆಸಲಾಗದೇ ಬೇರೆ ಏನೋ ಬರೆಸುತ್ತ ಹೋದರೆ ಲಿಂಗಾಯತರು ಮುಂಬರುವ ಎಲ್ಲ ಅವಕಾಶಗಳಿಂದ ವಂಚಿತರಾಗುತ್ತಾರೆ ಎಂಬುದನ್ನು ಮರೆಯಬಾರದು’ ಎಂದು ಹೇಳಿದರು. ‘ಲಿಂಗಾಯತರು ಎಚ್ಚರಗೊಳ್ಳುವ ಸಮಯ ಬಂದಿದ್ದು ಈ ಸಂದರ್ಭದಲ್ಲಿ ಎಚ್ಚರಗೊಳ್ಳದಿದ್ದರೆ ಮುಂದಿನ ಹತ್ತು ವರ್ಷಗಳ ಕಾಲ ಕಾಯಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಲಿಂಗಾಯತರು ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಧರ್ಮದ ಕಾಲಂನಲ್ಲಿ ಲಿಂಗಾಯತ ಜಾತಿ ಕಾಲಂನಲ್ಲಿ ತಮ್ಮ ಜಾತಿಯ ಹೆಸರನ್ನು ಬರೆಸಬೇಕು. ಇದರಿಂದ ಲಿಂಗಾಯತರ ನಿಖರ ಸಂಖ್ಯೆ ತಿಳಿಯುತ್ತದೆ’ ಎಂದು ತಿಳಿಸಿದರು.

ಬಸವ ಸಂಸ್ಕೃತಿ ಅಭಿಯಾನದ ರಥಯಾತ್ರೆ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಸಮಸ್ತ ಬಸವಪರ ಸಂಘಟನೆಗಳ ಆಶ್ರಯದಲ್ಲಿ ರಾಜ್ಯದಾದ್ಯಂತ ಬಸವ ಸಂಸ್ಕೃತಿ ಅಭಿಯಾನ ಅಂಗವಾಗಿ ಹಮ್ಮಿಕೊಂಡಿರುವ ರಥಯಾತ್ರೆಗೆ ನಗರದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿತು. ನಗರದ ಹತ್ತಿಕಾಳ ಕೂಟದಲ್ಲಿರುವ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡುವುದರೊಂದಿಗೆ ಆರಂಭವಾದ ಬಸವ ರಥಯಾತ್ರೆ ಹುಯಿಲಗೋಳ ನಾರಾಯಣರಾವ್ ವೃತ್ತ ಮಹೇಂದ್ರಕರ್ ವೃತ್ತ ಮಹಾತ್ಮ ಗಾಂಧಿ ವೃತ್ತ ಮಾರ್ಗವಾಗಿ ತೋಂಟದಾರ್ಯ ಮಠ ತಲುಪಿತು. ಮೆರವಣಿಗೆಯಲ್ಲಿ ಕದಳಿ ಮಹಿಳಾ ವೇದಿಕೆಯ ಸದಸ್ಯರು ವಚನದ ಕಟ್ಟುಗಳನ್ನು ತಲೆಮೇಲೆ ಹೊತ್ತು ಸಾಗಿದರು. ಮೆರವಣಿಗೆ ಜತೆಗೆ ವಿವಿಧ ಸ್ತಬ್ದಚಿತ್ರಗಳು ಹಾಗೂ ಕಲಾತಂಡಗಳು ರಥಯಾತ್ರೆಯ ಮೆರುಗು ಹೆಚ್ಚಿಸಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.