ಗದಗ: ರಾಜ್ಯ ಸರ್ಕಾರದ ಮುಂಬರುವ ಜಂಟಿ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲೇ ನಡೆಸಲಾಗುವುದು. ಈ ವಿಚಾರದಲ್ಲಿ ಸಾರ್ವಜನಿಕರಿಗೆ ಯಾವುದೇ ಗೊಂದಲ ಬೇಡ ಮತ್ತು ಸ್ಥಳ ಬದಲಾವಣೆ ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಸ್ಪಷ್ಟಪಡಿಸಿದರು.

‘ಅಧಿವೇಶನ ಕರೆಯುವ ಬಗ್ಗೆ ಸಚಿವ ಸಂಪುಟ ಅಧಿಕೃತವಾಗಿ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಮೇ 29ರಂದು ಮತ್ತೊಮ್ಮೆ ಸಚಿವ ಸಂಪುಟ ಸಭೆ ಸೇರುವ ಸಾಧ್ಯತೆಯಿದ್ದು, ಆ ಸಭೆಯಲ್ಲಿ ಅಧಿವೇಶನದ ದಿನವನ್ನು ಅಧಿಕೃತವಾಗಿ ಅಂತಿಮಗೊಳಿಸಲಾಗುವುದು’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಗ್ಯಾರಂಟಿ ಪರಿಷ್ಕರಣೆ ಮಹತ್ವದ್ದಾಗಿದೆ. ಎಸ್ಐಆರ್ನಲ್ಲಿ ಮತದಾನದ ಹಕ್ಕು ಕಳೆದುಕೊಂಡರೆ ಗ್ಯಾರಂಟಿ ನಿಲ್ಲುತ್ತದೆ ಎಂಬ ಭಯವಿದೆ. ಕೆಲವರಿಗೆ ಜಿಎಸ್ಟಿ ಕಾರಣದಿಂದ ನಿಂತಿದೆ. ಇದಕ್ಕೆ ಸ್ಪಷ್ಟೀಕರಣ ಕೊಟ್ಟವರ ಪರಿಷ್ಕರಣೆ ಮಾಡಲಾಗುತ್ತದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-23-345343666

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.