ಶನಿವಾರ, ಆಗಸ್ಟ್ 13, 2022
26 °C

ಬೆಣ್ಣೆಹಳ್ಳದಲ್ಲಿ ಟ್ರಾಕ್ಟರ್ ಸಮೇತ ಕೊಚ್ಚಿ ಹೋಗಿದ್ದ ಚಾಲಕ ಜೀವಂತವಾಗಿ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಮುಂಡರಗಿ ತಾಲ್ಲೂಕಿನ ಬೆಣ್ಣೆಹಳ್ಳದಲ್ಲಿ ಟ್ರಾಕ್ಟರ್ ಸಮೇತ ಕೊಚ್ಚಿಕೊಂಡು ಹೋಗಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಕೊಪ್ಪಳ ಜಿಲ್ಲೆ ಹೈದರ್ ನಗರ ತಾಂಡಾದ ಶಿವು ಬಡಿಗೇರ ಅಪಾಯದಿಂದ ಪಾರಾಗಿದ್ದಾರೆ. ಆದರೆ ಶಿವು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಈ ಬಗ್ಗೆ ಟಿವಿ ಮಾಧ್ಯಮಗಳು ಮೃತಪಟ್ಟಿರುವ ಸುದ್ದಿ ಪ್ರಕಟಿಸಿದ್ದವು.

ಮುಂಡರಗಿ ತಾಲ್ಲೂಕಿನ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬಿನ ಲೋಡ್ ಇಳಿಸಿ ಬುಧವಾರ ರಾತ್ರಿ ಊರಿಗೆ ಮರಳುವಾಗ ಟ್ರ್ಯಾಕ್ಟರ್ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಟ್ರ್ಯಾಕ್ಟರ್‌ನಲ್ಲಿ ಶಿವು ಜತೆಗೆ ಸಹೋದರ ವಿಜಯ್ ಕುಮಾರ್ ಇದ್ದರು. ಟ್ರ್ಯಾಕ್ಟರ್‌ ನೀರಿನಲ್ಲಿ ಮುಳುಗುತ್ತಿದ್ದಂತೆ ವಿಜಯ್ ಕುಮಾರ್ ಈಜಿ ಪಾರಾಗಿ ಬಂದಿದ್ದರು. ಆದರೆ ಶಿವು ಟ್ರ್ಯಾಕ್ಟರ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿದ್ದರು. 

ಘಟನೆ ನಡೆದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳಿಯರು ಶೋಧ ಕಾರ್ಯಾಚರಣೆ ನಡೆಸಿದರು ಶಿವು ಪತ್ತೆಯಾಗಿರಲಿಲ್ಲ. ಗುರುವಾರ ಬೆಳಗ್ಗೆ ಶಿವು ಸಂಬಂಧಿಕರಿಗೆ ಕರೆ ಮಾಡಿ ಅಪಾಯದಿಂದ ಪಾರಾಗಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು