ಭಾನುವಾರ, ಮಾರ್ಚ್ 29, 2020
19 °C

ಮುಂಡರಗಿ ಬಿಇಒ ಹಳ್ಳಿಗುಡಿ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಡರಗಿ: ವಿದ್ಯಾರ್ಥಿಗಳ ಮನೆ ಭೇಟಿ ಸಂದರ್ಭದಲ್ಲಿ, ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಆರೋಪದ ಎದುರಿಸುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎನ್.ಹಳ್ಳಿಗುಡಿ ಅವರನ್ನು ಅಮಾನತು ಮಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮನೆಗೆ ಬಂದ ಬಿಇಒ, ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬರು ಫೆ.21ರಂದು ಮುಂಡರಗಿ ಠಾಣೆಗೆ ದೂರು ನೀಡಿದ್ದಳು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಧನಂಜಯ ಅವರು ಬಿಇಒ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬಿಇಒ ಎಸ್.ಎನ್.ಹಳ್ಳಿಗುಡಿ ಅವರು ಅಮಾನತುಗೊಂಡಿರುವುದನ್ನು ಡಿಡಿಪಿಐ ಎನ್.ಎಚ್.ನಾಗೂರ ಅವರು ಖಚಿತಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)