‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ‘ಮೈಸೂರು ಚಲೋ’ ಪಾದಯಾತ್ರೆಯು ಆ.3ರಂದು ಬೆಂಗಳೂರಿನಿಂದ ಪ್ರಾರಂಭವಾಗಲಿದೆ. ಎಂಟು ದಿನ ನಡೆಯುವ ಈ ಪಾದಯಾತ್ರೆಗೆ ಗದಗ ಜಿಲ್ಲೆಯಿಂದ ಶಾಸಕರಾದ ಸಿ.ಸಿ .ಪಾಟೀಲ, ಡಾ. ಚಂದ್ರು ಲಮಾಣಿ, ಮಾಜಿ ಸಚಿವ ಕಳಕಪ್ಪ ಬಂಡಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ನೇತೃತ್ವದಲ್ಲಿ ಪಕ್ಷದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.