ಗದಗ: ‘ರಾಜ್ಯದಲ್ಲಿ ನೂರಾರು ಮಂದಿ ಬಾಣಂತಿಯರು ಮೃತಪಟ್ಟಿದ್ದು, ಇದಕ್ಕೆ ಸರ್ಕಾರದ ನಿರ್ಲಕ್ಷ್ಯ ಮತ್ತು ಆಡಳಿತದಲ್ಲಿನ ವೈಫಲ್ಯವೇ ಕಾರಣ. ಬಾಣಂತಿಯರ ಸಾವಿನ ಶಾಪ ಕಾಂಗ್ರೆಸ್ಗೆ ತಟ್ಟದೇ ಬಿಡುವುದಿಲ್ಲ. ನವಜಾತ ಶಿಶು ಮತ್ತು ಬಾಣಂತಿಯರ ಸಾವಿನ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು’ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಆಗ್ರಹಿಸಿದರು.

ಬಿಜೆಪಿ ಗದಗ ಜಿಲ್ಲಾ ಘಟಕ ಹಾಗೂ ಗದಗ ನಗರ ಮಂಡಲದ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿದೆ. ಸಚಿವ ಸಂಪುಟದ ಅನೇಕ ಸಚಿವರ ಮೇಲೆ ಎಫ್ಐಆರ್ಗಳು ದಾಖಲಾಗಿವೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿದೆ’ ಎಂದು ಹರಿಹಾಯ್ದರು.

ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ ಮಾತನಾಡಿ, ‘ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ದುರಾಡಳಿತ ಮಿತಿಮೀರಿದೆ. ಪ್ರಿಯಾಂಕ್ ಖರ್ಗೆ ಅವರ ಆಪ್ತನ ಕೈವಾಡದಿಂದ ತಾನು ಸಾವಿಗೆ ಶರಣಾಗುತ್ತಿರುವುದಾಗಿ ಸಚಿನ್ ಎಂಬ ಗುತ್ತಿಗೆದಾರ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಕಾರಣ, ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ಕೊಡಬೇಕು’ ಎಂದು ಆಗ್ರಹಿಸಿದರು.

‘ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರ ಈಗ ಪುರುಷ ಜೇಬಿಗೆ ಕತ್ತರಿ ಹಾಕಲು ಮುಂದಾಗಿದೆ. ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಬರಬೇಕು’ ಎಂದು ಹರಿಹಾಯ್ದರು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ನಿರ್ಮಲಾ ಕೊಳ್ಳಿ ಮಾತನಾಡಿ, ‘ರಾಜ್ಯ ಸರ್ಕಾರ ಮಹಿಳೆಯರ ಜೀವದ ಜತೆಗೆ ಚೆಲ್ಲಾಟವಾಡುತ್ತಿದೆ. ಸರಿಯಾದ ಔಷಧ, ಉಪಚಾರ ಇಲ್ಲದಿರುವ ಕಾರಣ ಸರ್ಕಾರಿ ಆಸ್ಪತ್ರೆಗಳಲ್ಲಿ ನೂರಾರು ಬಾಣಂತಿಯರು ಸಾವಿಗೀಡಾಗುತ್ತಿದ್ದಾರೆ. ಅನಾಥವಾದ ಹಸುಗೂಸುಗಳ ಶಾಪ ಆರೋಗ್ಯ ಸಚಿವರು, ಮುಖ್ಯಮಂತ್ರಿಗೆ ತಟ್ಟದೇ ಬಿಡುವುದಿಲ್ಲ’ ಎಂದು ಕಿಡಿಕಾರಿದರು.

ಬಿಜೆಪಿ ವಕ್ತಾರ ಎಂ.ಎಂ.ಹಿರೇಮಠ, ಎಂ.ಎಸ್.ಕರೀಗೌಡ್ರ, ಶ್ರೀಪತಿ ಉಡುಪಿ, ಅನೀಲ ಅಬ್ಬಿಗೇರಿ, ರಮೇಶ ಸಜ್ಜಗಾರ, ಉಷಾ ದಾಸರ, ಮಂಜು ಮುಳಗುಂದ, ವಿಜಯಲಕ್ಷ್ಮೀ ಮಾನ್ವಿ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ ಪಾಟೀಲ, ಆರ್.ಕೆ.ಚವ್ಹಾಣ, ನಾಗರಾಜ ಕುಲಕರ್ಣಿ, ಸಿದ್ದು ಪಲ್ಲೇದ, ವಿಜಯಕುಮಾರ ಗಡ್ಡಿ, ಈಶ್ವರಪ್ಪ ರಂಗಪ್ಪನವರ, ಬಿ.ಎಸ್.ಚಿಂಚಲಿ, ಭದ್ರೇಶ ಕುಸ್ಲಾಪೂರ, ವೈ.ಪಿ.ಅಡ್ನೂರ, ಭೀಮಸಿಂಗ್ ರಾಠೋಡ, ನಿಂಗಪ್ಪ ಹುಗ್ಗಿ, ಶಶಿಧರ ದಿಂಡೂರ, ಕೆ.ಪಿ.ಕೋಟಿಗೌಡ್ರ, ಇರ್ಷಾದ್ ಮಾನ್ವಿ, ರಾಘವೇಂದ್ರ ಯಳವತ್ತಿ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜ್ಯದಲ್ಲಿ ಶಿಕ್ಷಣ ಆರೋಗ್ಯ ಕ್ಷೇತ್ರಗಳಿಗೆ ವ್ಯಯಿಸಲು ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದಲೇ ಬಾಣಂತಿಯರು ಮೃತಪಡುತ್ತಿದ್ದಾರೆ.
ಡಾ. ಚಂದ್ರು ಲಮಾಣಿ, ಶಾಸಕ

ಕರ್ನಾಟಕ ಸರ್ಕಾರದ ದುರಾಡಳಿತದ ಸನ್ನಿವೇಶಗಳನ್ನು ರಾಜ್ಯದ ಜನರು ಗಮನಿಸುತ್ತಿದ್ದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ.
ರಾಜು ಕುರಡಗಿ, ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.