ಮುಳಗುಂದ: ‘ರಕ್ತದಾನ ಮಾಡಿ ಒಂದು ಜೀವ ಉಳಿಸುವ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು’ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಪ್ರವೀಣ ಎಸ್. ತುಪ್ಪದ ಹೇಳಿದರು.

ಇಲ್ಲಿನ ಆರ್ಎನ್ಡಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಭರವಸೆ ಕೋಶ ಹಾಗೂ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಅಂತರಾಷ್ಟ್ರೀಯ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ರಕ್ತದಾನ ಮಹತ್ವ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಆರ್.ಎಂ. ಕಲ್ಲನಗೌಡರ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆಯ ಧ್ಯೇಯೋದ್ದೇಶಗಳು ಹಾಗೂ ರೆಡ್ ಕ್ರಾಸ್ ದಿನಾಚರಣೆಯ ಮಹತ್ವ ಕುರಿತು ವಿವರಿಸಿದರು. ಪ್ರತಿಯೊಬ್ಬರೂ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.

ಯುವ ರೆಡ್ ಕ್ರಾಸ್ ಘಟಕದ ಸಂಚಾಲಕ ಮಾರುತಿ ಪ್ರಾಸ್ತಾವಿಕ ಮಾತನಾಡಿದರು. ಐಕ್ಯೂಎಸಿ ಸಂಚಾಲಕ ನಾಗರಾಜ್ ಎ, ಆರೋಗ್ಯ ಸಿಬ್ಬಂದಿ ನಜೀರ್, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.