ಶಿರಹಟ್ಟಿ: ಸ್ಥಳೀಯ ಟಿಎಪಿಎಂಸಿ ಕಟ್ಟಡದಲ್ಲಿ ಸೋಮವಾರ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ರಾಜ್ಯ ಸಹಕಾರ ಮಾರಾಟ ಮಂಡಳಿ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ಪ್ರಾರಂಭವಾದ ಹೆಸರು ಕಾಳು ಖರೀದಿ ಕೇಂದ್ರಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಖರೀದಿ ಕೇಂದ್ರದಲ್ಲಿ ಮಧ್ಯವರ್ತಿಗಳ ಹಾವಳಿ ಮತ್ತು ಗುಣಮಟ್ಟದ ಹೆಸರಿನಲ್ಲಿ ರೈತರಿಗೆ ಯಾವುದೇ ಸಮಸ್ಯೆ ಆಗದ ಹಾಗೇ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು’ ಎಂದು ಸೂಚನೆ ನೀಡಿದರು.

‘ಹೆಸರು ಕಾಳು ಬೆಳೆದು ಬೆಂಬಲ ಬೆಲೆಗೆ ಮಾರಾಟ ಮಾಡುವ ರೈತರಿಗೆ ಬೇಕಾಗುವ ದಾಖಲೆ ಹಾಗೂ ಜಿಪಿಎಸ್ ಬಗ್ಗೆ ಅಧಿಕಾರಿಗಳು ಜಾಗೃತಿಗೊಳಿಸಬೇಕು. ಹೆಸರು ಖರೀದಿ ಬಗ್ಗೆ ಕೇಂದ್ರದಲ್ಲಿ ಪ್ರಾಮಾಣಿಕತೆ ಇರಬೇಕಿದ್ದು, ಸರದಿಯಲ್ಲಿ ಖರೀದಿ ಮಾಡಬೇಕು. ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಲ್ಲೊಂದಾದ ಈ ಬೆಂಬಲ ಬೆಲೆ ಹೆಸರು ಖರೀದಿ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಂಡು ತಾವು ಬೆಳೆದ ಹೆಸರು ಕಾಳುಗಳನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬೇಕು’ ಎಂದು ಹೇಳಿದರು.

ಶಾಸಕ ಡಾ. ಚಂದ್ರು ಲಮಾಣಿ, ತಹಶೀಲ್ದಾರ್ ಅನಿಲ ಬಡಿಗೇರ, ಕೃಷಿ ಅಧಿಕಾರಿ ರೇವಣೆಪ್ಪ ಮನಗೂಳಿ, ಟಿಎಪಿಎಂಸಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ರಾಜು ಕುರುಡಗಿ, ಸುನೀಲ ಮಹಾಂತೇಶೆಟ್ಟರ, ವಿಶ್ವನಾಥ ಕಪ್ಪತ್ತನವರ, ಶಿವಪ್ರಕಾಶ ಮಹಾಜನಶಟ್ಟರ, ನಾಗರಾಜ ಲಕ್ಕುಂಡಿ, ನಾಗರಾಜ ಕುಲಕರ್ಣಿ, ಫಕ್ಕೀರೇಶ ರಟ್ಟಿಹಳ್ಳಿ, ಎಂ.ಎಸ್. ಕರಿಗೌಡ್ರ, ಚಂದ್ರಕಾಂತ ನೂರಶೆಟ್ಟರ, ಬಿ.ಡಿ. ಪಲ್ಲೇದ, ರಮೇಶ ಕಂಬಳಿ, ಅಶೋಕ ಪಲ್ಲೇದ, ಸಂದೀಪ ಕಪ್ಪತ್ತನವರ, ಗೂಳಪ್ಪ ಕರಿಗಾರ, ಸೇರಿದಂತೆ ಸಹಕಾರ ಸಂಘದ ಅಧಿಕಾರಿಗಳು, ಸಿಬ್ಬಂದಿ ಹಾಗೂ ರೈತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.