ಗಜೇಂದ್ರಗಡ: ‘ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಹೆಚ್ಚಿಸುವ ಮೂಲಕ ರಾಜ್ಯದ ಜನರಿಗೆ ಒಂದು ಕೈಗೆ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳುತ್ತಿದೆ’ ಎಂದು ಬಿಜೆಪಿ ರೋಣ ಮಂಡಲ ಯುವ ಮೋರ್ಚಾದ ಅಧ್ಯಕ್ಷ ಉಮೇಶ ಚನ್ನು ಪಾಟೀಲ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ‘ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣದಿಂದ ಈಗಾಗಲೇ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದು, ನಷ್ಟ ಸರಿದೂಗಿಸಲು ಪುರುಷರ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿದೆ. ಅಲ್ಲದೆ ಮನೆಗಳಿಗೆ ಉಚಿತ ವಿದ್ಯುತ್ ನೀಡಿ ಔದ್ಯೋಗಿಕ ವಿದ್ಯುತ್ ದರ ಹೆಚ್ಚಿಸಲಾಗಿದೆ. ಅಕ್ಕಿ, ಬೇಳೆ, ಮಂಡಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಮುದ್ರಾಂಕ, ವಾಹನ ನೋಂದಣಿ ಶುಲ್ಕಗಳ ಏರಿಕೆ ಸೇರಿದಂತೆ ಜನಸಾಮಾನ್ಯರಿಗೆ ಅಗತ್ಯವಾಗಿರುವ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ಸರ್ಕಾರವಾಗಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಕಳಪೆ ಗುಣಮಟ್ಟದ ಔಷಧ ಪೂರೈಸುವ ಮೂಲಕ ಹಲವು ಬಾಣಂತಿಯರ ಸಾವಿಗೆ ಕಾರಣವಾಗಿರುವ ಸರ್ಕಾರಕ್ಕೆ ರಾಜ್ಯದ ಜನರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.