ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಂಸ ತಿಂದು ದೇಗುಲಕ್ಕೆ ಹೋಗುತ್ತೇನೆನ್ನುವ ಭಂಡತನ ಯಾರೂ ಒಪ್ಪಲಾರರು: ವಿಜಯೇಂದ್ರ

Last Updated 23 ಆಗಸ್ಟ್ 2022, 5:27 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ (ಗದಗ): ‘ಯಾರು ಏನು ಬೇಕಾದರೂ ತಿನ್ನಬಹುದು. ಆ ಸ್ವಾತಂತ್ರ್ಯ ಅವರಿಗೆ ಇದೆ. ಆದರೆ, ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ ಎನ್ನುವ ಭಂಡತನವನ್ನು ಯಾರೂ ಒಪ್ಪಲಾರರು’ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ನಮ್ಮದು ಸಂಸ್ಕೃತಿ, ಪರಂಪರೆ ಇರುವ ನಾಡು. ಇಲ್ಲಿ ಧಾರ್ಮಿಕ ಶ್ರದ್ಧೆ ಬಹಳ ಮುಖ್ಯ. ನಾವು ದೈವವನ್ನು ನಂಬಿ ಜೀವನ ನಡೆಸುವವರು. ರಾಜಕಾರಣದಲ್ಲಿ ಇರುವವರು ಬಹಿರಂಗ ಹೇಳಿಕೆ ಕೊಡುವಾಗ ಎಚ್ಚರಿಕೆ ವಹಿಸಬೇಕು’ ಎಂದರು.

ಆಗಸ್ಟ್‌ 18ರಂದು ಗುರುವಾರ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರು ಮಾಂಸದೂಟ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT